ಬೆಂಗಳೂರು : 114ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ನಿನ್ನೆ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ ಮಹಾನ್ ಪರಿಸರ ಪ್ರೇಮಿಗೆ ಅಂತಿಮ ನಮನ ಸಲ್ಲಿಸಿದ ತರುವಾಯ ಮಾತನಾಡಿದ ಅವರು, ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಬೆಳೆಸಿ ವಿಶ್ವಕ್ಕೇ ವೃಕ್ಷಗಳ ಮಹತ್ವ ಸಾರಿದ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ಸಸಿನೆಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಸಲಿದೆ ಎಂದರು.
ಇಲಾಖೆ ಅವರನ್ನು ಪರಿಸರ ರಾಯಭಾರಿಯಾಗಿ ಪುರಸ್ಕರಿಸಿತ್ತು. ಅಜ್ಜಿಯ ಪ್ರೇರಣೆಯಿಂದ ನೂರಾರು ಜನರು ತಮ್ಮ ಕೈಲಾದಷ್ಟು ಸಸಿ ನೆಟ್ಟು ಪೋಷಿಸುತ್ತಿದ್ದಾರೆ. ಲಕ್ಷಾಂತರ ಪರಿಸರ ಪ್ರೇಮಿಗಳಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕ ಅವರ ನಿಧನದಿಂದ ರಾಜ್ಯ ನಿಷ್ಠಾವಂತ ಪರಿಸರ ಕಾಳಜಿಯ ಮಹಾಜೀವಿಯನ್ನು ಕಳೆದುಕೊಂಡಿದೆ ಎಂದು ದುಃಖ ವ್ಯಕ್ತಪಡಿಸಿದರು.
ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಈಶ್ವರ ಬಿ ಖಂಡ್ರೆ ತಿಳಿಸಿದರು.
BREAKING: ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆ ಸಾವು: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ
BIG NEWS: ರಾಜ್ಯ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್: 8 ರಿಂದ 12 ಸಚಿವರು ಔಟ್?








