ಬೆಂಗಳೂರು: ಬಿ.ವೈ. ವಿಜಯೇಂದ್ರ ಅವರು ಕರ್ನಾಟಕ ರಾಜ್ಯದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾಗಿ ಇಂದಿಗೆ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುತ್ತಾರೆ. ಈ ಸಂದರ್ಭದಲ್ಲಿ ಜಗನ್ನಾಥ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಕ್ಷದ ಹಿರಿಯರ ಸಮ್ಮುಖದಲ್ಲಿ ಗೌರವಿಸಿ ಶುಭಕೋರಲಾಯಿತು.
ಬಿ.ವೈ. ವಿಜಯೇಂದ್ರ ಅವರು ತಮ್ಮ ಅಧ್ಯಕ್ಷತೆಯ ಜವಾಬ್ದಾರಿಯನ್ನು ಬೂತ್ ಅಧ್ಯಕ್ಷರ ಮನೆಗೆ ಭೇಟಿ ಪ್ರಾರಂಭಿಸಿದ್ದರು. ಕರ್ನಾಟಕ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ತಳಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಕಳೆದ 2ವರ್ಷಗಳಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಈಗಾಗಲೇ ಭೇಟಿ ನೀಡಿರುತ್ತಾರೆ.
ಅವರ ನೇತೃತ್ವದಲ್ಲಿ ಕೈಗೊಂಡ ಮೈಸೂರು ಮುಡಾ ಹಗರಣದ ಪಾದಯಾತ್ರೆ, ವಾಲ್ಮೀಕಿ ಹಗರಣ ಕುರಿತಾದ ಹೋರಾಟ, ಬೆಲೆ ಏರಿಕೆ ಖಂಡಿಸಿ ನಡೆಸಿದ ಅಹೋರಾತ್ರಿ ಧರಣಿ, ಬೆಲೆ ಏರಿಕೆ ವಿರುದ್ಧ ರಾಜ್ಯಾದ್ಯಂತ ಕೈಗೊಂಡ ಜನಾಕ್ರೋಶ ಯಾತ್ರೆ, ಕಬ್ಬು ಬೆಳೆಗಾರರ ಹೋರಾಟ, ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನದ ದುರ್ಬಳಕೆಯ ವಿರುದ್ಧ ಹೋರಾಟ, ರಾಜ್ಯ ಸರ್ಕಾರದ ಶೂನ್ಯ ಅಭಿವೃದ್ಧಿಯ ವಿರುದ್ಧ ನಡೆಸಿದ ಹೋರಾಟಗಳ ಮೂಲಕ ಜನ ಸಾಮಾನ್ಯರ ದೈನಂದಿನ ಸಮಸ್ಯೆಗಳ ಕುರಿತು ಸರ್ಕಾರದ ಗಮನಸೆಳೆದು ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತದ ವಿರುದ್ಧ ಹೋರಾಟ ರೂಪಿಸುವಲ್ಲಿ ನೇತೃತ್ವವನ್ನು ವಹಿಸಿರುತ್ತಾರೆ.
ಅಧ್ಯಕ್ಷರ ಯಶಸ್ವಿ ನೇತೃತ್ವದಿಂದ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೆಚ್ಚಿನ ಮನ್ ಕೀ ಬಾತ್ ಕಾರ್ಯಕ್ರಮದ ಅನುಷ್ಠಾನದಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿರುವುದು ನಮ್ಮೆಲ್ಲರಿಗೆ ಹೆಮ್ಮೆ ತಂದಿದೆ.
ಜಗನ್ನಾಥ ಭವನದಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ಯಶಸ್ವಿಯಾಗಿ ಎರಡು ವರ್ಷ ಪೂರೈಸಿ 3ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಕೋರ್ ಕಮಿಟಿ ಸದಸ್ಯ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಮತ್ತು ಪಕ್ಷದ ಪ್ರಮುಖರು ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿ ಶುಭ ಹಾರೈಸಿದರು.
ಸಾಲುಮರದ ತಿಮ್ಮಕ್ಕ ಗೌರವಾರ್ಥ 114 ಸ್ಥಳದಲ್ಲಿ 114 ವೃಕ್ಷ ನೆಡಲಾಗುತ್ತೆ: ಸಚಿವ ಈಶ್ವರ್ ಖಂಡ್ರೆ
IPL ಮಿನಿ-ಹರಾಜಿಗೂ ಮುನ್ನ RCB ಉಳಿಸಿಕೊಂಡ ಆಟಗಾರರ ಪಟ್ಟಿ ಇಲ್ಲಿದೆ | IPL retentions








