ಬೆಂಗಳೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 06 ಕೊನೆಯ ದಿನವಾಗಿದೆ.
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ.
ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸತಕ್ಕದ್ದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ.98 ಸಾವಿರ ಹಾಗೂ ನಗರ ಪ್ರದೇಶದಲ್ಲಿ ರೂ.1.20 ಲಕ್ಷಗಳನ್ನು ಮೀರತಕ್ಕದ್ದಲ್ಲ. ಅಂಗವಿಕಲ ಮಹಿಳೆಯರಿಗೆ ಶೇ.5 ರಷ್ಟು ಮೀಸಲಿರಿಸತಕ್ಕದ್ದು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33 ರಷ್ಟು, ವಿಕಲಚೇತನರಿಗೆ ಶೇ.5ರಷ್ಟು ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಅಂಗವಿಕಲ ಮಹಿಳೆಯರಿಗೆ ಶೇ.2 ರಷ್ಟನ್ನು ಮೀಸಲಿರಿಸುವುದು. ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ ಹೆಚ್.ಐ.ವಿ ಪೀಡಿತರಿಗೆ 35 ವರ್ಷ ವಯೋಮಿತಿ ಮೀರಿರತಕ್ಕ ಅವಿವಾಹಿತ ಮಹಿಳೆಯರಿಗೆ ಶೇ.2 ರಷ್ಟನ್ನು ಮೀಸಲಿರಿಸುವುದು.
ಈ ಯೋಜನೆಗೆ ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕವೇ ಸಲ್ಲಿಸಬೇಕಿದೆ. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್‍ಲೈನ್ ನಲ್ಲಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು, ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಈ ಯೋಜನೆಯಲ್ಲಿ ಒಂದು ಸಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು. ನಿಗಮದ ಸಹಾಯವಾಣಿ: 8867537799/ ದೂ.ಸಂ:080-29903994 (ಬೆಳಿಗ್ಗೆ:10ರಿಂದ ಸಂಜೆ:5.30ವರೆಗೆ ಸಂಪರ್ಕಿಸಬಹುದಾಗಿದೆ).
ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸಗಳನ್ನು ಹಾಗೂ ಹೆಚ್ಚಿನ ವಿವರಗಳನ್ನು https://kmcdc.karnataka.gov.in ಇಲ್ಲಿ ತಿಳಿಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಆಯಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ) ಕಚೇರಿಗೆ ಭೇಟಿ ನೀಡಿ ಪಡೆಯುವಂತೆ ತಿಳಇಸಲಾಗಿದೆ.
ಮಾಹಿತಿ ಹಕ್ಕು ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಮಾಹಿತಿ ನೀಡಿ: ಆಯುಕ್ತ ರುದ್ರಣ್ಣ ಹರ್ತಿಕೋಟೆ ಸೂಚನೆ
KDP ಸಭೆಗೆ ಗೈರಾದ ಅಧಿಕಾರಿಗಳಿಗೆ ಮದ್ದೂರು ಶಾಸಕ ಕೆ.ಎಂ ಉದಯ್ ಶಾಕ್: ನೋಟೀಸ್ ಗೆ ಸೂಚನೆ








