ಮೈಸೂರು : ಮೈಸೂರು ನಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಉಪನ್ಯಾಸಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಉಪನ್ಯಾಸಕನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಹೆಚ್ಚು ಅಂಕ ನೀಡುತ್ತೇನೆ, ಕೆಲಸ ಕೊಡಿಸುತ್ತೇನೆ ಎಂದು ಆಮಿಷವೊಡ್ಡಿ ಹೊರಗಡೆ ಪಬ್ ಗೆ ಹೋಗಿ ಮಜಾ ಮಾಡೋಣ ಬಾ ಎಂದು ಕಿರುಕುಳ ನೀಡಿದ್ದಾರೆ. ಈ ಸಂಬಂಧ ಮಹಿಳಾ ಉಪನ್ಯಾಸಕರಿಗೆ ವಿದ್ಯಾರ್ಥಿನಿ ದೂರು ನೀಡಿದ್ದರು. ದೂರು ನೀಡಿದ್ದಕ್ಕೆ ಉಪನ್ಯಾಸಕ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನಾನು ಹೇಳಿದಂತೆ ಕೇಳದಿದ್ದರೆ ಫೇಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಹೀಗಾಗಿ ಉಪನ್ಯಾಸಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿ ಮನವಿ ಮಾಡಿದ್ದಾರೆ. ಮೈಸೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯ ದೂರು ಆಧರಿಸಿ ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 8(2)351 ,(2)75 ,(2)126 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.








