ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಮನೆ ಮಾಲೀಕನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಸದ್ಯ ವಿಜಯಪುರ ಠಾಣೆ ಪೊಲೀಸ್ರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಠಾಣೆ ಪೊಲೀಸರು ಇಬ್ಬರು ಆರೋಪಗಳನ್ನು ಅರೆಸ್ಟ್ ಮಾಡಿದ್ದಾರೆ.
ಅತ್ಯಾಚಾರಕ್ಕೆ ಮಾಲೀಕನಿಗೆ ಬಾಡಿಗೆ ಮನೆ ಮಹಿಳೆ ಕೂಡ ಸಾತ್ ನೀಡಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಹಾಗಾಗಿ ಚಂದ್ರಶೇಖರ್ ಮತ್ತು ಮಂಜೂರಾಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಲಕಿಯ ಪೋಷಕರು ಪಕ್ಕದ ಮನೆಯ ಮಹಿಳೆಯ ಬಳಿ ತಮ್ಮ ಮಗಳನ್ನ ಬಿಟ್ಟು ಹೋಗಿದ್ದರು. ಈ ವೇಳೆ ಮನೆ ಮಾಲೀಕನನ್ನ ಮನೆಗೆ ಕರೆಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಲಾಗಿದೆ. ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.








