ಬೆಂಗಳೂರು : ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರ ರಚನೆ ಕುರಿತು ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಿದರು ಈ ವೇಳೆ ರಾಹುಲ್ ಗಾಂಧಿ ರಾಜ್ಯ ಸಚಿವ ಸಂಪುಟ ಪುನ ರಚನೆಗೆ ತಾತ್ವಿಕ ಒಪ್ಪಿಗೆ ನೀಡಿದರು ಎಂದು ಹೇಳಲಾಗಿತ್ತು ಆದರೆ ಇದೀಗ ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಸಚಿವ ಸಂಪುಟ ಪುನರಚನೆ ಮಾಡದಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಸದ್ಯಕ್ಕೆ ಸಿದ್ದರಾಮಯ್ಯ ಸಂಪುಟಕ್ಕೆ ಯಾವುದೇ ಸರ್ಜರಿ ಇಲ್ಲ. ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೆ ಸದ್ಯಕ್ಕೆ ಫುಲ್ ಸ್ಟಾಪ್ ನೀಡಲಾಗಿದೆ. ಸಂಕ್ರಾಂತಿ ಬಳಿಕವಷ್ಟೇ ಸಂಪುಟಕ್ಕೆ ಸರ್ಜರಿ ಸಾಧ್ಯತೆ ಎನ್ನಲಾಗುತ್ತಿದೆ. ಸದ್ಯಕ್ಕೆ ಬದಲಾವಣೆ ಮಾಡದಂತೆ ಹೈಕಮಾಂಡ್ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಳಗಾವಿ ಅಧಿವೇಶನ ಮುಗಿಸಿದ ಬಳಿಕವಷ್ಟೇ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ರಾಜ್ಯ ನಾಯಕರಿಗೆ ಈ ಬಗ್ಗೆ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದ್ದಾರೆ. ಸಂಕ್ರಾತಿ ಬಳಿಕ ನಾಯಕತ್ವ ಅಥವಾ ಸಂಪುಟ ಪುನಾರಚನೆ ವಿಚಾರ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಎಐಸಿಸಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.








