ಕಲಬುರ್ಗಿ : ಕಲ್ಬುರ್ಗಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬೈಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿ ಬೈಕ್ ಒಂದು ಧಗಧಗನೆ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಸಜೀವ ದಹನಗೊಂಡಿರುವ ಘಟನೆ ಕಲಬುರ್ಗಿಯ ಮಹಾಗವ್ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗವ್ ಕ್ರಾಸ್ ಬಳಿ ತಡರಾತ್ರಿ ಕಾರು ಮತ್ತು ಬೈಕ್ ಮಧ್ಯ ಭೀಕರ ಅಪಘಾತ ಸಂಭವಿಸಿದೆ. ಬೈಕಿಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದಿದೆ. ಮೃತರನ್ನ ಆಕಾಶ ಧನವಂತ ಮತ್ತು ಸುಶೀಲ್ ಎಂದು ತಿಳಿದುಬಂದಿದ್ದು, ಇಬ್ಬರು ಸಜೀವ ದಹನಗೊಂಡಿದ್ದಾರೆ. ಇಬ್ಬರು ಸಿರಗಾಪುರ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಮಹಾಗವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








