ಬೆಂಗಳೂರು: ಕೇವಲ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕ ಸೇರಿದಂತೆ ಇಡೀ ದೇಶದಲ್ಲೇ ನಾಯಿ, ಹಾವು ಹಾಗೂ ಇತರೆ ಪ್ರಾಣಿಗಳ ಕಡಿತದಿಂದ ಸಾವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಈ ಕುರಿತು ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿತ್ತು. ಆದರೆ ಕೆಲವು ರಾಜ್ಯಗಳು ಮಾತ್ರ ಸುಪ್ರೀಂ ಕೋರ್ಟ್ ಗೆ ವರದಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ವರದಿ ಸಲ್ಲಿಸದ ರಾಜ್ಯಗಳಿಗೆ ಇತ್ತೀಚಿಗೆ ಚೀಮಾರಿ ಹಾಕಿತ್ತು. ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಪ್ರಾಣಿ ಕಡಿತಕ್ಕೆ ಮುಂಗಡ ಹಣ ಕೇಳದೇ ತಕ್ಷಣ ಪ್ರಥಮ ಚಿಕಿತ್ಸೆ ನೀಡುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ.
ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತು ಕರ್ನಾಟಕ ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಗಳಿಗೆ ಸುತ್ತೋಲೆ ಹೊರಡಿಸಿದೆ. ಹೌದು ಸುಪ್ರೀಂ ಕೋರ್ಟ್ ಎಚ್ಚರಿಕೆಯ ನಂತರ ಸರ್ಕಾರವು ನಾಯಿ, ಹಾವು ಕಡಿತಕ್ಕೆ ಉಚಿತ ತುರ್ತು ಚಿಕಿತ್ಸೆ, ಆ್ಯಂಟಿ-ರೇಬೀಸ್ ಲಸಿಕೆ ಮತ್ತು ಪ್ರಥಮ ಚಿಕಿತ್ಸೆ ನೀಡಲು ಹೊಸ ಸುತ್ತೋಲೆ ಹೊರಡಿಸಿದೆ.
ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್‌ಗಳ ಕಡ್ಡಾಯ ಸಂಗ್ರಹ ಹೊಂದಿರಬೇಕು. ನಾಯಿ, ಹಾವು ಸೇರಿದಂತೆ ಇತರೆ ಪ್ರಾಣಿಗಳು ಕಚ್ಚಿದವರಿಗೆ ಉಚಿತ ಪ್ರಾಥಮಿಕ ತಪಾಸಣೆ ಹಾಗೂ ಪ್ರಥಮ ಚಿಕಿತ್ಸೆ ಕಡ್ಡಾಯ ನೀಡಬೇಕು. ಯಾವುದೇ ಆಸ್ಪತ್ರೆ ಮುಂಗಡ ಹಣ ಕೇಳದೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಬೇಕು ಎಂಬುದಾಗಿ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಸೌಲಭ್ಯ ಇಲ್ಲದ ಆಸ್ಪತ್ರೆಗಳು ಪ್ರಥಮ ಚಿಕಿತ್ಸೆ ನೀಡಿ ಸಮೀಪದ ಆಸ್ಪತ್ರೆಗೆ ಸುರಕ್ಷಿತ ರವಾನೆ ಮಾಡಬೇಕು. ಆಸ್ಪತ್ರೆಯ ವೆಚ್ಚವನ್ನ ಜಿಲ್ಲಾ ನೋಂದಣಿ ಮತ್ತು ಅಹವಾಲು ಪರಿಹಾರ ಪ್ರಾಧಿಕಾರ ಮರಳಿ ಪಾವತಿಸಲಿದೆ. ಚಿಕಿತ್ಸೆ ನೀಡದೆ ವೈದ್ಯಕೀಯ ನಿರ್ಲಕ್ಷ್ಯಕ್ಕೆ 2 ವರ್ಷ ಜೈಲು ಶಿಕ್ಷೆ ಸಾಧ್ಯತೆ. ಗಂಭೀರ ನಿರ್ಲಕ್ಷ್ಯ ಕಂಡುಬಂದರೆ ಆಸ್ಪತ್ರೆಯ ಪರವಾನಗಿ ರದ್ದು ಮಾಡಲಾಗುವುದು ಎಂಬುದಾಗಿ ಎಚ್ಚರಿಕೆ ನೀಡಿದೆ.
ಇನ್ನು 2030ರೊಳಗೆ ನಾಯಿ ಕಚ್ಚುವಿಕೆ ಹಾಗೂ ರೇಬೀಸ್‌ನಿಂದ ಶೂನ್ಯ ಸಾವು ಸಾಧಿಸುವ ಗುರಿ ಇದೆ. ಹಾವು ಕಚ್ಚಿದವರಿಗೂ ಸಮೀಪದ ಆರೋಗ್ಯ ಕೇಂದ್ರದಲ್ಲಿ ತಕ್ಷಣದ ತುರ್ತು ಚಿಕಿತ್ಸೆ ಸಿಗಬೇಕು. ಜಿಲ್ಲಾ ನೋಂದಣಿ ಮತ್ತು ಅಹವಾಲು ಪ್ರಾಧಿಕಾರದ ಮೂಲಕ ಚಿಕಿತ್ಸಾ ವೆಚ್ಚ ನೀಡಲಾಗುವುದು. SAST ಯೋಜನೆಯ ಅಡಿಯಲ್ಲಿ ರೋಗಿಗಳಿಗೆ ದಾಖಲಾತಿ ಮಾಡಬೇಕು ಎಂದು ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.


ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿ.ಕೆ.ಸುರೇಶ್
SHOCKING : ನಾಯಿಗೆ ಮುದ್ದು ಮಾಡುವ ನೆಪದಲ್ಲಿ, ಯುವತಿಯ ಮೈ-ಕೈ ಮುಟ್ಟಿ ‘ಲೈಂಗಿಕ ಕಿರುಕುಳ’ ನೀಡಿದ ಕಾಮುಕ!
ಈ ಹಂತ ಅನುಸರಿಸಿ, ಮನೆಯಲ್ಲೇ ‘ಬಕೆಟ್’ನಲ್ಲಿ ‘ಅಣಬೆ’ ಬೆಳೆಯಿರಿ | Mushrooms








