ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದೆ. ಹುಲಿ ದಾಳಿಯಿಂದಾಗಿ ಹಸುವೊಂದು ಬಲಿಯಾಗಿದ್ದು, ಕೂದಲೆಳೆಯ ಅಂತರದಲ್ಲಿ ರೈತನೊಬ್ಬ ಪಾರಾಗಿದ್ದಾನೆ.
ಮೈಸೂರು ಜಿಲ್ಲೆಯ ಬೆಣ್ಣೆಗೆರೆ ಬಳಿ 1 ಲಕ್ಷ ಮೌಲ್ಯದ ಹೆಚ್ ಎಫ್ ತಳಿಯ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿ, ಕೊಂದು ಹಾಕಿದೆ. ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಹಸು ಮೇಲೆ ಹುಲಿ ದಾಳಿ ವೇಳೆ ಅಲ್ಲೇ ಇದ್ದಂತ ರೈತ ರಾಜಶೇಖರ್ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾನೆ. ರೈತ ಜಯಪ್ಪ ಎಂಬುವರಿಗೆ ಸೇರಿದಂತ ಹೆಚ್ ಎಫ್ ತಳಿಯ ಹಸು ಹುಲಿದಾಳಿಗೆ ಬಲಿಯಾಗಿದೆ.
ಹಸುವಿನ ಮೇಲೆ ಹುಲಿ ದಾಳಿ ಮಾಡಿದ್ದನ್ನು ಕಂಡಂತ ರೈತ ಜಯಪ್ಪ, ಬಿಡಿಸಲಾಗದೇ ತಾನು ಬದುಕಿದರೆ ಸಾಕು ಎಂಬುದಾಗಿ ಅಲ್ಲಿಂದ ಓಡಿ ಹೋಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹುಲಿ ಹಿಡಿಯದಂತ ಅರಣ್ಯ ಇಲಾಖೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
SHOCKING : ನಾಯಿಗೆ ಮುದ್ದು ಮಾಡುವ ನೆಪದಲ್ಲಿ, ಯುವತಿಯ ಮೈ-ಕೈ ಮುಟ್ಟಿ ‘ಲೈಂಗಿಕ ಕಿರುಕುಳ’ ನೀಡಿದ ಕಾಮುಕ!








