ಬಾಗಲಕೋಟೆ: ಸಕ್ಕರೆ ಕಾರ್ಖಾನೆ ಬಳಿ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಿಂಗಪುರ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಅಲ್ಲದೇ ಈ ಪ್ರಕರಣ ಸಂಬಂಧ ಈವರೆಗೆ 10 ಮಂದಿ ವಶಕ್ಕೆ ಪಡೆಯಲಾಗಿದೆ ಎಂಬುದಾಗಿ ಎಸ್ ಪಿ ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಬಾಗಲಕೋಟೆ ಎಸ್ ಪಿ ಮಾಹಿತಿ ನೀಡಿದ್ದು, ಸಕ್ಕರೆ ಕಾರ್ಖಾನೆ ಮುಂದೆ ನಿಲ್ಲಿಸಿದ್ದಂತ ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿದ ಕೃತ್ಯವು ರೈತರದ್ದಲ್ಲ. ಬದಲಾಗಿ ಕಿಡಿಗೇಡಿಗಳದ್ದಾಗಿದೆ. ಈ ಕೃತ್ಯ ಸಂಬಂಧ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕವಾಗಿ ಎಫ್ಐಆರ್ ದಾಖಲಾಗಿದೆ ಎಂದರು.
ನಮ್ಮ ಪಿಎಸ್ಐಗಳ ದೂರು ಆಧರಿಸಿ ಎರಡು ಎಫ್ಐಆರ್, ಕಾರ್ಖಾನೆಯವರ ದೂರಿನಡಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಈ ಘಟನೆಯ ಬಗ್ಗೆ ವೀಡಿಯೋ ದೃಶ್ಯಾವಳಿ ಸಂಗ್ರಹ ಮಾಡಿದ್ದೇವೆ. ಪ್ರತ್ಯಕ್ಷ ಸಾಕ್ಷಿ ಮೂಲಕ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಎವಿಡೆನ್ಸ್ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದೇವೆ ಎಂಬುದಾಗಿ ತಿಳಿಸಿದರು.
ಇದು ರೈತರು ಮಾಡಿರುವ ಕೃತ್ಯವಲ್ಲ. ಕಿಡಿಗೇಡಿಗಳ ಕೃತ್ಯವಾಗಿದೆ. ಈ ಸಂಬಂಧ ಈವರೆಗೆ 10 ಜನರನ್ನು ವಶಕ್ಕೆ ಪಡೆದಿದ್ದೇವೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಆಗಲಿದೆ ಎಂಬುದಾಗಿ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯಲ್ ತಿಳಿಸಿದರು.
SHOCKING : ನಾಯಿಗೆ ಮುದ್ದು ಮಾಡುವ ನೆಪದಲ್ಲಿ, ಯುವತಿಯ ಮೈ-ಕೈ ಮುಟ್ಟಿ ‘ಲೈಂಗಿಕ ಕಿರುಕುಳ’ ನೀಡಿದ ಕಾಮುಕ!
ಈ ಹಂತ ಅನುಸರಿಸಿ, ಮನೆಯಲ್ಲೇ ‘ಬಕೆಟ್’ನಲ್ಲಿ ‘ಅಣಬೆ’ ಬೆಳೆಯಿರಿ | Mushrooms








