ಬೆಂಗಳೂರು : ಇಂದಿನಿಂದ ಬೆಂಗಳೂರಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪರಿಷೆಗೆ ಚಾಲನೆ ನೀಡಲಿದ್ದಾರೆ.
ಬೆಂಗಳೂರು ಸುತ್ತಮುತ್ತಲ ಪ್ರದೇಶಗಳು ಮಾತ್ರವಲ್ಲದೆ ನೆರೆಯ ತಮಿಳುನಾಡು, ಆಂಧ್ರ ಪ್ರದೇಶಗಳಿಂದ ರೈತರು ಹಾಗೂ ವ್ಯಾಪಾರಿಗಳು ಕಡಲೆಕಾಯಿಯೊಂದಿಗೆ ಆಗಮಿಸಿ ಮಳಿಗೆಗಳನ್ನು ತೆರೆದಿದ್ದಾರೆ. ಈ ಬಾರಿ 5 ಬಸವಣ್ಣಗಳನ್ನು ಅಲಂಕರಿಸಿ ದೇವಾಲಯಕ್ಕೆ ಕರೆತಂದು ಅವುಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪರಿಷೆಗೆ ಚಾಲನೆ ನೀಡಲಾಗುತ್ತಿದೆ.
ಈ ಬಾರಿ ಬಸವನಗುಡಿ ರಸ್ತೆಗೆ ಸೀಮಿತವಾಗಿದ್ದ ಅಲಂಕಾರವನ್ನು ಗಾಂಧಿ ಬಜಾರ್, ಎನ್.ಆರ್. ರಸ್ತೆ ಸೇರಿ ಸುತ್ತಮುತ್ತ ರಸ್ತೆಗಳಿಗೆ ವಿಸ್ತರಿಸಲಾಗಿದೆ. ಬಸವನಗುಡಿಯ ದೊಡ್ಡಗಣಪತಿ ದೇವಾಲಯದಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಐತಿಹಾಸಿಕ ಹಿನ್ನೆಲೆ ಇದ್ದು, ಪ್ರತಿ ವರ್ಷದಂತೆ ಈ ವರ್ಷವು ಯಾವುದೇ ಅಹಿತಕರ ಘಟನೆ ಆಗದಂತೆ ಅದ್ಧೂರಿ ಆಗಿ ಕಡಲೆಕಾಯಿ ಪರಿಷೆ ನಡೆಸಲು ನಿರ್ಧರಿಸಲಾಗಿದೆ.








