ಪಾಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ನವೆಂಬರ್ 20 ರಂದು ಬಿಹಾರದ 10ನೇ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಿತೀಶ್ ಕುಮಾರ್ ಅವರು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯಪಾಲರಿಗೆ ಪತ್ರ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಹೊಸ ಎನ್‌ಡಿಎ ಸರ್ಕಾರ ರಚನೆಗೆ ಸಿದ್ಧತೆಗಳು ನಡೆಯುತ್ತಿದ್ದು, ಇಂದು ನಡೆಯುವ ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ವಹಿಸಿದ್ದು, ಬಳಿಕ ನಿತೀಶ್ ಕುಮಾರ್ ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸಲ್ಲಿಸಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಯಿಂದ ಚುನಾಯಿತರಾದ ಸದಸ್ಯರ ಪಟ್ಟಿಯೊಂದಿಗೆ ಮುಖ್ಯ ಚುನಾವಣಾಧಿಕಾರಿ ವಿನೋದ್ ಸಿಂಗ್ ಗುಂಜಿಯಾಲ್ ಭಾನುವಾರ ರಾಜ್ಯಪಾಲರನ್ನು ಭೇಟಿಯಾದ ನಂತರ ಈ ಬೆಳವಣಿಗೆ ಸಂಭವಿಸಿದೆ.
243 ಸದಸ್ಯ ಬಲದ ವಿಧಾನಸಭೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗಳಿಸುವ ಮೂಲಕ ಬಹುಮತ ಗಳಿಸಿತು, ಬಿಜೆಪಿ ಗರಿಷ್ಠ 89 ಸ್ಥಾನಗಳನ್ನು ಗೆದ್ದಿತು, ನಂತರ ಜೆಡಿ (ಯು) 85 ಸ್ಥಾನಗಳನ್ನು ಗಳಿಸಿತು. ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ (ಆರ್‌ವಿ) 19 ಸ್ಥಾನಗಳನ್ನು ಗೆದ್ದುಕೊಂಡಿತು ಮತ್ತು ಇನ್ನೂ ಒಂಬತ್ತು ಸ್ಥಾನಗಳನ್ನು ಸಣ್ಣ ಪಾಲುದಾರರಾದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ಗೆದ್ದವು. ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು.
#WATCH | Bihar Chief Minister Nitish Kumar leaves from Raj Bhavan; reaches his residence in Patna
NDA registered a landslide victory in the recently concluded #BiharElection2025, winning 202 of the 243 seats in the state. pic.twitter.com/cB7yaIYypj
— ANI (@ANI) November 17, 2025








