ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರ ವಲಯದ ರಾಣಿ ಕ್ರಾಸ್ ನಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಆಂಧ್ರಪ್ರದೇಶದ ಅನಂತಪುರ ಮೂಲದ ಅನಿತಾ (20) ಅಮೃತ ಯುವತಿ ಎಂದು ತಿಳಿದುಬಂದಿದೆ ಇನ್ನು ಬೈಕ್ ನ ಹಿಂಬದಿ ಕುಳಿತಿದ್ದ ಮತ್ತು ಮಹಿಳೆಗೆ ಗಂಭೀರವಾದ ಗಾಯಗಳಾಗಿದ್ದು ಟಿಪ್ಪರ್ ಜಪ್ತಿ ಮಾಡಿ ಪೊಲೀಸರು ಲಾರಿ ಚಾಲಕನನ್ನು ಅರೆಸ್ಟ್ ಮಾಡಿದ್ದಾರೆ. ಅಪಘಾತದ ಕುರಿತು ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








