ಬೆಂಗಳೂರು : ರಾಜು ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸಿದ್ದು ದೆಹಲಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಂಪುಟ ಪುನಾರಚನೆ ಕುರಿತು ಚರ್ಚಿಸಿದ್ದಾರೆ. ರಾಹುಲ್ ಗಾಂಧಿ ಸಂಪುಟ ಪುನಾರಚನೆಗೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಬಳಿಕ ಇಂದು ಸಹ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಅಲ್ಲದೆ ಡಿಕೆ ಶಿವಕುಮಾರ್ ಸಹ ದೆಹಲಿಗೆ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ.
ಇದರ ಮಧ್ಯ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಟ್ವೀಟ್ ಖಾತೆಯಲ್ಲಿ ಸಂದೇಶವನ್ನು ನೀಡಿದ್ದು, ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ. ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೂ ನನ್ನನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕೆಲಸ ಮಾಡಲು ಹೇಳುತ್ತಾರೋ ಅಲ್ಲಿಯವರೆಗೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ಬರುವಂತೆ ದುಡಿಯುವವನು ಎಂದು ತಿಳಿಸಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ
ಕಾಂಗ್ರೆಸ್ ಪಕ್ಷಕ್ಕಾಗಿ ನಾನು ಹಗಲು-ರಾತ್ರಿ ದುಡಿದಿದ್ದೇನೆ, ದುಡಿಯುತ್ತಿದ್ದೇನೆ, ದುಡಿಯುತ್ತಲೇ ಇರುತ್ತೇನೆ.
I am a born Congressman and I will die as a Congressman! pic.twitter.com/aBQxDLjRUY
— DK Shivakumar (@DKShivakumar) November 17, 2025








