ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ 14 ಕೋಟಿ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಟ್ಟು 14 ಕೋಟಿ ಗಾಂಜಾ ಜಪ್ತಿ ಮಾಡಲಾಗಿದೆ. ಕಳೆದ 18 ದಿನಗಳಲ್ಲಿ 14 ಕೋಟಿ 22 ಲಕ್ಷ ವಶಕ್ಕೆ ಪಡೆದಿದ್ದಾರೆ.
ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದರು ಪ್ರತ್ಯೇಕ ಪ್ರಕರಣಗಳಲ್ಲಿ 10 ಆರೋಪಿಗಳಿಂದ 38.64 ಕೆಜಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ 2.38 ಲಕ್ಷ ಮೌಲ್ಯದ ಇ-ಸಿಗರೇಟ್ 8 ಬಗೆಯ ವಿವಿಧ ಪ್ರಾಣಿಗಳು ವಶಕ್ಕೆ ಪಡೆಯಲಾಗಿದೆ. ಏರ್ಪೋರ್ಟ್ ನಲ್ಲಿ ಪ್ರಯಾಣಿಕರ ತಪಾಸಣೆಯ ವೇಳೆ ಈ ವಸ್ತುಗಳು ಸಿಕ್ಕಿವೆ. 10 ಆರೋಪಿಗಳ ವಿರುದ್ಧ ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.








