ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರು ನಿನ್ನೆ ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆಸ್ಪತ್ರೆಯ ವೈದ್ಯರು ಪಾರ್ವತಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ಬಿಎಮ್ ಪಾರ್ವತಿಯವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಹೌದು ಸಿಎಂ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ ಆರೋಗ್ಯದಲ್ಲಿ ಇದೀಗ ಚೇತರಿಕೆ ಕಂಡು ಬಂದಿದೆ. ಅಪೋಲೋ ಆಸ್ಪತ್ರೆಯ ವೈದ್ಯರು ಪಾರ್ವತಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ನಿನ್ನೆ ಮಧ್ಯಾಹ್ನದ ಪಾರ್ವತಿ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆಯಿಂದ ಬಿಎಮ್ ಪಾರ್ವತಿ ಆಸ್ಪತ್ರೆಗೆ ದಾಖಲಾಗಿದ್ದರು.
ಪಾರ್ವತಿಯವರಿಗೆ ಡಯುರೆಟಿಕ್ಸ್ ನೀಡಲಾಗಿದೆ. ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಐಸಿಯುನಿಂದ ಪಾರ್ವತಿಯವರನ್ನು ವಾರ್ಡಿಗೆ ಶಿಫ್ಟ್ ಮಾಡಲಾಗಿದೆ. ಹೃದ್ರೋಗ ವಿಭಾಗದ ಹಿರಿಯ ವೈದ್ಯ ಶ್ರೀನಿವಾಸ್ ನೇತೃತ್ವದಲ್ಲಿ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಇನ್ನು ದಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾರ್ವತಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿರುವ ವಿಚಾರ ತಿಳಿದು ತಕ್ಷಣ ಪತ್ನಿಯನ್ನು ನೋಡಲು ಬೆಂಗಳೂರಿಗೆ ಆಗಮಿಸಿದ್ದಾರೆ.








