ಚಿಕ್ಕಬಳ್ಳಾಪುರ : ಸಚಿವ ಸಂಪುಟ ಪುನಾರಚನೆ ವೇಳೆ ನನಗೆ ಸಚಿವ ಸ್ಥಾನ ಬೇಕೇ ಬೇಕು ಕಳೆದ ಬಾರಿ ಕೊನೆ ಕ್ಷಣದಲ್ಲಿ ನನಗೆ ಸಚಿವ ಸ್ಥಾನ ಕೈತಪ್ಪಿದೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಶಾಸಕ ಸುಬ್ಬಾರೆಡ್ಡಿ ಸಚಿವ ಸ್ಥಾನದ ಆಕಾಂಕ್ಷೆ ಎಂದು ಹೇಳಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸುಬ್ಬಾರೆಡ್ಡಿ, ಎರಡುವರೆ ವರ್ಷದ ನಂತರ ಸಚಿವ ಸ್ಥಾನದ ಭರವಸೆ ನೀಡಿದ್ದರು. ಎರಡುವರೆ ವರ್ಷ ಮುಗಿದಿದೆ ಈಗ ನನಗೆ ಮಂತ್ರಿ ಸ್ಥಾನ ಬೇಕೇ ಬೇಕು. ಸಿಎಂ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಹೇಳಿದಂತೆ ನನಗೆ ಸಚಿವ ಸ್ಥಾನ ಬೇಕು ಎಂದು ಬಾಗೇಪಲ್ಲಿಯಲ್ಲಿ ಕಾಂಗ್ರೆಸ್ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಹೇಳಿಕೆ ನೀಡಿದರು.








