ಉತ್ತರ ಕನ್ನಡ: ಜಿಲ್ಲೆಯಲ್ಲಿ ಎಥೆನಾಲ್ ಗ್ಯಾಸ್ ತುಂಬಿಕೊಂಡು ತೆರಳುತ್ತಿದ್ದಂತ ಟ್ಯಾಂಕರ್ ಉರುಳಿ ಬಿದ್ದಿದೆ. ಈ ಹಿನ್ನೆಯಲ್ಲಿ ಕಂಚಿನ ಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರ ವ್ಯಾಪ್ತಿಯಲ್ಲಿ 1 ಕಿ.ಮೀ ದೂರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶಿಸಿದ್ದಾರೆ.
ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನ ಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗುಜರಾತ್ ನಿಂದ ಉಡುಪಿ ಕಡೆಗೆ ತೆರಳುತ್ತಿದ್ದಂತ ಗ್ಯಾಸ್ ಟ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದೆ. ಹೀಗಾಗಿ ಗ್ಯಾಸ್ ಸೋರಿಕೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದಾಗಿ ತಿಳಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಗ್ಯಾಸ್ ಟ್ಯಾಂಕರ್ ತಜ್ಞರು ಬರುವಂತೆ ಡಿಸಿ ಸೂಚಿಸಿದ್ದಾರೆ. ಗ್ಯಾಸ್ ಟ್ಯಾಂಕರ್ ಪಲ್ಟಿಯಿಂದಾಗಿ ಲಾರಿ ಚಾಲಕನ ಸ್ಥಿತಿ ಗಂಭೀರಗೊಂಡಿದೆ. ಅಂಕೋಲಾ ತಹಶೀಲ್ದಾರ್ ಚಿಕ್ಕಪ್ಪ ನಾಯಕ್ ಅವರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆ ಮುಖಂಡ ಅರೆಸ್ಟ್
ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ








