Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕೆಂಪು ಮಾಂಸ’ ತಿನ್ನುವುದ್ರಿಂದ ಮಧುಮೇಹದ ಅಪಾಯ ಶೇ.50ರಷ್ಟು ಹೆಚ್ಚಾಗ್ಬೋದು : ಹೊಸ ಅಧ್ಯಯನ

06/03/2026 10:05 PM

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM

ಸುಖಿ ದಾಂಪತ್ಯಕ್ಕೆ ಲೈಂಗಿಕ ತೃಪ್ತಿ ಅಗತ್ಯ: ಸಂಗಾತಿಯ ಮನ ಗೆಲ್ಲಲು ಇಲ್ಲಿವೆ ಸರಳ ಸೂತ್ರಗಳು

06/03/2026 9:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಹಕಾರ ಸಂಘಗಳಿಂದ ಮಾತ್ರ ಸಾಧ್ಯ: ಶಾಸಕ ಕೆ.ಎಂ.ಉದಯ್
KARNATAKA

ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಹಕಾರ ಸಂಘಗಳಿಂದ ಮಾತ್ರ ಸಾಧ್ಯ: ಶಾಸಕ ಕೆ.ಎಂ.ಉದಯ್

By kannadanewsnow0918/11/2025 5:13 PM

ಮಂಡ್ಯ : ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಹಕಾರ ಸಂಘಗಳಿಂದ ಮಾತ್ರ ಸಾಧ್ಯವಾಗಲಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಮಂಡ್ಯ ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ತೈಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಶ್ರಯದಲ್ಲಿ ಮದ್ದೂರು ನಗರದ ಟಿಎಪಿಸಿಎಂಎಸ್ ಆವರಣದಲ್ಲಿ ಆಯೋಜಿಸಿದ್ದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತಿಚಿನ ದಿನಗಳಲ್ಲಿ ಸಹಕಾರ ಕ್ಷೇತ್ರದಲ್ಲಿ ಸಂಘಗಳ ಪಾತ್ರ ಅಪಾರವಾಗಿದ್ದು, ರೈತರ ಜೀವನಾಡಿಯಾಗುತ್ತಿವೆ. ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನಗಳಿಂದ ಅಸಾಧ್ಯವಾಗಿದ್ದು, ಸಹಕಾರ ಸಂಘಗಳಿಂದ ಮಾತ್ರ ಸಾಧ್ಯವಾಗಲಿದೆ. ರೈತರಿಗೆ ಕಾಲ ಕಾಲಕ್ಕೆ ಸಾಲ ಸೌಲಭ್ಯ ನೀಡಿ ರೈತರ ಬೆನ್ನೆಲುಬಾಗಿ ನಿಂತಿರುವುದರಿಂದ ರೈತರ ಬದುಕು ಕೂಡ ಹಸನಾಗುತ್ತಿದೆ. ಸಹಕಾರ ಸಂಸ್ಥೆಗಳು ಇನ್ನಷ್ಟು ಅಭಿವೃದ್ಧಿಯಾಗಬೇಕು ಇದರಿಂದ ರೈತರ ಬದುಕು ಸುಧಾರಣೆಗೊಳ್ಳಲಿದ್ದು, ತಾಲೂಕಿನ ಸಹಕಾರ ಸಂಘಗಳಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಹಕಾರ ಕ್ಷೇತ್ರದ ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸಧೃಡಗೊಳ್ಳುವ ಮೂಲಕ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಿದ್ದಾರೆ. ಹೀಗಾಗಿ ಮಹಿಳೆಯರಿಂದಲೂ ಸಹ ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಇತ್ತಿಚಿನ ದಿನಗಳಲ್ಲಿ ತಾಲೂಕಿನ ಕೆಲವು ಸಹಕಾರ ಸಂಘಗಳಲ್ಲಿ ವ್ಯಾಪಕ ಭ್ರಷ್ಟಾಚಾರಗಳು ನಡೆಯುತ್ತಿದ್ದು, ಇಂತಹುಗಳಿಂದ ನೈಜತೆ ಹೊಂದಿರುವ ಸಂಘಗಳಿಗೆ ಕೆಟ್ಟ ಹೆಸರು ಬರುತ್ತಿದೆ. ಹೀಗಾಗಿ ಸಂಘದ ಹಣಕಾಸು ವ್ಯವಹಾರಗಳಲ್ಲಿ ಯಾವುದೇ ಭ್ರಷ್ಟಾಚಾರ ನಡೆಯದಂತೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಎಚ್ಚರಿಕೆ ವಹಿಸುವಂತೆ ಕಿವಿಮಾತು ಹೇಳಿದರು.

ಡಿಸಿಸಿ ಬ್ಯಾಂಕ್ ಸಿಇಓ ವನಜಾಕ್ಷಿ ಮಾತನಾಡಿ, ಗ್ರಾಮೀಣ ಭಾಗದ ಜನರ, ಮಹಿಳೆಯರ ಸ್ವಾವಲಂಬನೆಗೆ ಜಿಲ್ಲಾದ್ಯಂತ ಇರುವ ಸಹಕಾರ ಸಂಘಗಳು ಸಾಕಷ್ಟು ಅನುದಾನ ನೀಡುತ್ತಿದ್ದು, ಜಿಲ್ಲೆಯಲ್ಲಿ ಮಹಿಳೆಯರ ಸ್ವಾಭಿಮಾನದ ಬದುಕಿಗೆ ಸಹಕಾರ ಕ್ಷೇತ್ರ ಮಹತ್ವದ ಕೊಡುಗೆ ನೀಡುತ್ತಿದೆ ಎಂದರು.

ಮನ್ ಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ‌.ಆರ್.ಮಂಜೇಶ್ ಮಾತನಾಡಿ, ಜಿಲ್ಲಾ ಹಾಲು ಒಕ್ಕೂಟಕ್ಕೆ ಪ್ರತಿ ನಿತ್ಯ 12 ಲಕ್ಷ ಲೀಟರ್ ಹಾಲು ಬರುತ್ತಿದ್ದು, 5 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟವಾಗುತ್ತಿದೆ. ಉಳಿದ 7 ಲಕ್ಷ ಲೀಟರ್ ಹಾಲಿಗೂ ಸಹ ಸರ್ಕಾರದ ನಿರ್ದೇಶನದಂತೆ ರೈತರಿಗೆ 4 ರೂ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ವಾರ್ಷಿಕ 90 ಕೋಟಿ ರೂ ಒಕ್ಕೂಟಕ್ಕೆ ಹೊರೆಯಾಗುತ್ತಿದೆ ಎಂದರು.

ರಾಜ್ಯದಲ್ಲಿ ಒಟ್ಟು 16 ಹಾಲು ಒಕ್ಕೂಟಗಳಿದ್ದು, ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಕಾರ್ಯ ಚಟುವಟಿಕೆಗಳಲ್ಲಿ ಪ್ರತಿ ಬಾರಿಯೂ ಮೊದಲು, ಅಥವಾ ಎರಡನೇ ಸ್ಥಾನಗಳನ್ನು ಪಡೆದುಕೊಳ್ಳುತ್ತಿದೆ. ಗುಣಮಟ್ಟ ಹಾಗೂ ಮಾರುಕಟ್ಟೆ ವ್ಯವಹಾರಗಳಲ್ಲಿಯೂ ಸಹ ಮೊದಲನೇ ಸ್ಥಾನದಲ್ಲಿದ್ದೇವೆ. ಹಾಗೂ ಮನ್ ಮುಲ್ ವ್ಯಾಪ್ತಿಯ ಎಲ್ಲಾ ಸಹಕಾರ ಸಂಘಗಳಲ್ಲಿ ಡಿಜಿಟಲೀಕರಣ ಮಾಡಲಾಗಿದ್ದು, ತಂತ್ರಾಂಶವನ್ನು ಅಳವಡಿಸಿಕೊಂಡು ಮಾನವ ರಹಿತವಾಗಿ ಹಾಲು ಶೇಖರಣೆ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು‌.

ಇದೇ ವೇಳೆ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರುಗಳಿಗೆ ಸಹಕಾರ ಸಪ್ತಾಹದ ಅಂಗವಾಗಿ ಅಭಿನಂದಿಸಲಾಯಿತು.

ಕಾರ್ಯಕ್ರಮ ಕುರಿತು ಡಾ. ದಿವ್ಯ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಜೋಗಿಗೌಡ, ಚಲುವರಾಜು, ಪಿ.ಸಂದರ್ಶ್, ಮನ್ ಮುಲ್ ನಿರ್ದೇಶಕ ಹರೀಶ್ ಬಾಬು, ತೈಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಅಂಕಪ್ಪ, ಮಂಡ್ಯ ಜಿಲ್ಲಾ ಸಹಕಾರ ಒಕ್ಕೂಟದ ವಿಶೇಷಾಧಿಕಾರಿ ಕೆ.ಅನಿತಾ, ಟಿಎಪಿಸಿಎಂಎಸ್ ಆಡಳಿತಾಧಿಕಾರಿ ಎಚ್.ಆರ್.ನಾಗಭೂಷಣ್, ಮನ್ ಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಅಕಲಪ್ಪರೆಡ್ಡಿ ಉಪ ವ್ಯವಸ್ಥಾಪಕ ಡಾ.ಎ.ಎನ್ ಮಂಜೇಶ್ ಗೌಡ ಹಾಲು ಒಕ್ಕೂಟದ ಸಹಾಯಕ ವ್ಯವಸ್ಥಾಪಕರು, ವಿಸ್ತರಣಾಧಿಕಾರಿಗಳು ಹಾಗೂ ತಾಲೂಕಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇದ್ದರು.

ವಿಜಯಪುರ ವಿಮಾನ ನಿಲ್ದಾಣಕ್ಕೆ ಅಡ್ಡಿ ನಿವಾರಣೆ: ಸುಪ್ರೀಂಕೋರ್ಟ್ ನಿಲುವಿಗೆ ಎಂ.ಬಿ.ಪಾಟೀಲ ಸ್ವಾಗತ

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

Share. Facebook Twitter LinkedIn WhatsApp Email

Related Posts

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM3 Mins Read

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM1 Min Read

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM1 Min Read
Recent News

‘ಕೆಂಪು ಮಾಂಸ’ ತಿನ್ನುವುದ್ರಿಂದ ಮಧುಮೇಹದ ಅಪಾಯ ಶೇ.50ರಷ್ಟು ಹೆಚ್ಚಾಗ್ಬೋದು : ಹೊಸ ಅಧ್ಯಯನ

06/03/2026 10:05 PM

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM

ಸುಖಿ ದಾಂಪತ್ಯಕ್ಕೆ ಲೈಂಗಿಕ ತೃಪ್ತಿ ಅಗತ್ಯ: ಸಂಗಾತಿಯ ಮನ ಗೆಲ್ಲಲು ಇಲ್ಲಿವೆ ಸರಳ ಸೂತ್ರಗಳು

06/03/2026 9:57 PM

BREAKING : 183 ಸಿಬ್ಬಂದಿಯೊಂದಿಗೆ ಇರಾನಿನ ಯುದ್ಧನೌಕೆ ಕೊಚ್ಚಿಯಲ್ಲಿ ಸುರಕ್ಷಿತ ಡಾಕಿಂಗ್!

06/03/2026 9:45 PM
State News
KARNATAKA

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

By kannadanewsnow0906/03/2026 10:01 PM KARNATAKA 3 Mins Read

ದುಬೈ: ಶುಕ್ರವಾರ ಮಂಡನೆಯಾಗಿರುವ ಕರ್ನಾಟಕ ಬಜೆಟ್-2026ರಲ್ಲಿ ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ‘ಪ್ರತ್ಯೇಕ ಸಚಿವಾಲಯ’ ಘೋಷಣೆಯಾಗದಿರುವುದು ಅತೀವ…

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: RV ರಸ್ತೆ- ಜಯನಗರ ನಿಲ್ದಾಣಗಳ ನಡುವಿನ ತಾತ್ಕಾಲಿಕ ವೇಗ ನಿಯಂತ್ರಣ

06/03/2026 7:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.