ಮಂಡ್ಯ : ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳುವ ಮೂಲಕ ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ರೈತ ಕವಿ ದೊ.ಚಿ.ಗೌಡ ಮಕ್ಕಳಿಗೆ ಕಿವಿಮಾತು ಹೇಳಿದರು.
ಮದ್ದೂರು ನಗರದ ಗ್ಲೋಬಲ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಇತ್ತಿಚೆಗೆ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಕನ್ನಡಾಂಬೆ ಮತ್ತು ಜವಾಹರಲಾಲ್ ನೆಹರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು, ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಬಿತ್ತಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗುವ ರೀತಿ ಅವಕಾಶ ನೀಡಬೇಕು. ಮಕ್ಕಳ ಪ್ರತಿ ಹಂತದ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಮಹತ್ವವಾದುದು. ನಮ್ಮ ದಿನನಿತ್ಯದ ಜೀವನದಲ್ಲಿ ಕನ್ನಡವನ್ನು ಉಳಿಸಿ, ಬೆಳೆಸುವ ಕಾರ್ಯ ಪ್ರತಿಯೊಬ್ಬರ ಮೇಲಿದೆ. ಕನ್ನಡ ಭಾಷಾಭಿಮಾನವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳಬೇಕಾಗಿದೆ. ಶಿಕ್ಷಣದಿಂದ ಪಡೆದಂತಹ ಜ್ಞಾನದಿಂದ ಜಗತ್ತಿನ ಯಾವ ಮೂಲೆಯಲ್ಲಾದರೂ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದರು.
ಸಂಸ್ಥೆಯ ಅಧ್ಯಕ್ಷ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ಸಂತೋಷ್ ಮಾತನಾಡಿ, ನಮ್ಮ ಬದುಕು ಬದಲಾಗಲು ಶಿಕ್ಷಣದಿಂದ ಮಾತ್ರ ಸಾಧ್ಯ. ನಮ್ಮ ನಾಡು, ನುಡಿ, ಭಾಷೆ, ನೀರು, ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರ ಉಸಿರು ಕನ್ನಡ ಆಗಬೇಕು. ಆಗ ಮಾತ್ರ ಕನ್ನಡ ನೆಲದಲ್ಲಿ ಜನಿಸಿದ ನಾವೆಲ್ಲರೂ ಸಾರ್ಥಕ ಬದುಕು ಕಟ್ಟಿಕೊಳ್ಳಲು ಸಾಧ್ಯ. ಹೆತ್ತ ತಂದೆ, ತಾಯಿಯ ಮೇಲಿರುವಷ್ಟು ಪ್ರೀತಿ, ಅಭಿಮಾನ ಕನ್ನಡ ಭಾಷೆಯ ಮೇಲೆ ಕೂಡ ಇರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಿಕೊಟ್ಟರು. ಹಾಗೂ ರೈತ ಕವಿ ದೊ.ಚಿ.ಗೌಡ ಮತ್ತು ಎಎಸ್ಐ ಗಣೇಶ್ ಬಾಬು ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಶಿವನಂಜಯ್ಯ, ನಗರಸಭೆ ಸದಸ್ಯೆ ಸರ್ವಮಂಗಳ, ಆಡಳಿತಾಧಿಕಾರಿ ಕಲ್ಪಿತಾ, ಮುಖ್ಯೋಪಾದ್ಯಾಯಿನಿ ಪಾವನಾ ಹಾಗೂ ಶಿಕ್ಷಕ ವೃಂದ, ಸಿಬ್ಬಂದಿಗಳು ವಿಧ್ಯಾರ್ಥಿಗಳು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಹಕಾರ ಸಂಘಗಳಿಂದ ಮಾತ್ರ ಸಾಧ್ಯ: ಶಾಸಕ ಕೆ.ಎಂ.ಉದಯ್








