Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಹುಲ್ ಗಾಂಧಿ ನಮ್ಮ ನಾಯಕರು, ಅವರ ಭೇಟಿ ಹೊಸತಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

15/01/2026 2:59 PM

ಡಿಜಿಟಲ್ ಚಿನ್ನ vs ಭೌತಿಕ ಚಿನ್ನ: 2026ರಲ್ಲಿ ಯಾವುದು ಬೆಸ್ಟ್? ಇಲ್ಲಿದೆ ಮಾಹಿತಿ | Digital Gold

15/01/2026 2:53 PM

ಸಾಗರದ ‘ಚೋರಡಿ ಅರಣ್ಯಾಧಿಕಾರಿ’ಗಳ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ಕಡಿತಲೆ ಮಾಡಿದ್ದ ‘ಸಾಗುವಾನಿ ಮರ’ ವಶಕ್ಕೆ

15/01/2026 2:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಧೂಮಪಾನಿಗಳೇ ಎಚ್ಚರ : ಪ್ರತಿ ಸಿಗರೇಟ್, ಬೀಡಿ ಸೇವನೆಯಿಂದ 7 ನಿಮಿಷ ಆಯುಷ್ಯ ಕಡಿಮೆ.!
KARNATAKA

ALERT : ಧೂಮಪಾನಿಗಳೇ ಎಚ್ಚರ : ಪ್ರತಿ ಸಿಗರೇಟ್, ಬೀಡಿ ಸೇವನೆಯಿಂದ 7 ನಿಮಿಷ ಆಯುಷ್ಯ ಕಡಿಮೆ.!

By kannadanewsnow5719/11/2025 5:35 AM

ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶ ಹಾಗೂ ಸುರಭಿ ಮಧ್ಯವ್ಯಸನ ಮುಕ್ತಿ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ “60 ದಿನಗಳ ತಂಬಾಕು ಮುಕ್ತ ಯುವ ಅಭಿಯಾನ” ಕಾರ್ಯಕ್ರಮವನ್ನು ಇತ್ತೀಚೆಗೆ ಸುರಭಿ ಮಧ್ಯವ್ಯಸನ ಮುಕ್ತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಅಭಿಯಾನದ ಅಂಗವಾಗಿ ತಂಬಾಕು ಅಂಗಡಿಗಳ ಮೇಲೆ ಪರಿಶೀಲನಾ ದಾಳಿ ನಡೆಸಿ, ತಂಬಾಕು ಸೇವನೆಯಿಂದಾಗುವ ಆರೋಗ್ಯ ಅಪಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎನ್.ಟಿ.ಸಿ.ಪಿ ಜಿಲ್ಲಾ ಸಲಹೆಗಾರ ಸಂಗಪ್ಪ ಮಮಟಗೇರಿ ಅವರು, ತಂಬಾಕು ಮುಕ್ತ ಯುವ ಅಭಿಯಾನವು ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಯುವಕರಿಗೆ ಅರಿವು ಮೂಡಿಸುವುದಾಗಿದೆ. ಜನಸಾಮಾನ್ಯರನ್ನು ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಗಳಿಂದ ರಕ್ಷಿಸಲು ಭಾರತ ಸರ್ಕಾರವು ಒಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ಬಗ್ಗೆ 2003ರಲ್ಲಿ ಕೋಟ್ಟಾ ಕಾಯ್ದೆಯನ್ನು ಜಾರಿಗೊಳಿಸಿದೆ. ಸೆಕ್ಷನ್-4 ಪ್ರಕಾರ ಸಾರ್ವಜನಿಕ ಸ್ಥಗಳಲ್ಲಿ ಧೂಮಪಾನ ಮಾಡುವುದು ನಿಷೇಧ. ಸೆಕ್ಷನ್-5ರ ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು, ಉತ್ತೇಜನ ಪ್ರಯೋಜಕತೆ ನಿಷೇಧ. ಸೆಕ್ಷನ್-6(ಅ) ತಂಬಾಕು ಉತ್ಪನ್ನಗಳು ಅಪ್ರಾಪ್ತ ವಯಸ್ಕರಿಗೆ (21 ವರ್ಷದೊಳಗಿನ ಮಕ್ಕಳಿಗೆ) ಸಿಗದಂತೆ ನಿಯಂತ್ರಣ ಮಾಡುವುದು, ಸೆಕ್ಷನ್-6(ಆ) ಪ್ರಕಾರ ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಹಾಗೂ ಅಪ್ರಾಪ್ತ ವಯಸ್ಕರಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದು ಶಿಕ್ಷಾರ್ಹ ಅಪರಾಧ. ಸೆಕ್ಷನ್-6 ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಅಂತರ ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಸೆಕ್ಷನ್-7, 8 ಮತ್ತು 9 ಪ್ರಕಾರ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರುವುದನ್ನು ನಿಷೇಧಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕೊಟ್ಟಾ ಕಾಯ್ದೆ-2003 ಕಲಂ 20ರ ಅಡಿಯಲ್ಲಿ ದಂಡ ಮತ್ತು ಜೈಲು ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದರು.

 ಯುವಜನತೆ ತಂಬಾಕು ಸೇವನೆಯಿಂದ ದೂರವಿರಬೇಕು. ತಂಬಾಕು ಸೇವನೆ ಬಿಟ್ಟು ಬದುಕನ್ನು ಆಯ್ದುಕೊಳ್ಳಿ ಈ ವಿಷಯವನ್ನು ಅರ್ಥಿಗಳು ತಮ್ಮ ತಮ್ಮ ಗ್ರಾಮಗಳಲ್ಲಿ, ಸುತ್ತ-ಮುತ್ತಲಿನ ಸಾರ್ವಜನಿಕರಿಗೆ ಅರಿವು ಮೂಡಿಸಿ, ತಂಬಾಕು ಮುಕ್ತ ಪರಿಸರ ನಿರ್ಮಿಸಲು ಎಲ್ಲರೂ ಸಹಕರಿಸಬೇಕು. ತಂಬಾಕು ಸೇವನೆಯಿಂದಾಗುವ ಕ್ಯಾನ್ಸರ್, ಹೃದಯ ಸಂಬAಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಕಾಯಿಲೆಗಳು ಬರಬಹುದು. ಪ್ರತಿ ಸಿಗರೇಟ್, ಬೀಡಿ ಸೇವನೆಯಿಂದ 7 ನಿಮಿಷ ಆಯುಷ್ಯ ಕಡಿಮೆ ಮಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸುತ್ತದೆ. ಆದ್ದರಿಂದ ತಂಬಾಕು ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ತಿಳಿಸಿದರು.

 ಎನ್.ಟಿ.ಸಿ.ಪಿ ಸಮಾಜ ಕಾರ್ಯಕರ್ತೆ ಸರಸ್ವತಿ ಅವರು ಕಾರ್ಯಕ್ರಮ ಕುರಿತು ಮಾತನಾಡಿ, ಪ್ರತಿ ವರ್ಷ ಮೇ-31 ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಕರಿಗೆ ಅರಿವು ಮೂಡಿಸಲಾಗುತ್ತಿದೆ. ಸಿಗರೇಟ್, ಬೀಡಿ, ಸಿಗಾರ್, ಹುಕ್ಕಾ ತಂಬಾಕು ವಿಧಗಳಾಗಿವೆ. ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಕಾಯಿಲೆಗಳು ಬರಬಹುದು. ತಂಬಾಕಿನಲ್ಲಿ ನಿಕೋಟಿನ್ ಎಂಬ ವಿಷಕಾರಕ ಪದಾರ್ಥ ಇರುತ್ತದೆ. ಇದರಲ್ಲಿ 4000 ದಿಂದ 7000 ಅಪಾಯಕಾರಿ ರಾಸಾಯನಿಕ ವಿಷಾನಿಲಗಳು ಇರುತ್ತವೆ. ಮಹಿಳೆಯರಲ್ಲೂ ತಂಬಾಕು ಸೇವನೆಯಿಂದ ಗರ್ಭಪಾತ, ಗರ್ಭಕಂಠದ ಕ್ಯಾನ್ಸರ್, ಕಡಿಮೆ ತೂಕವಿರುವ ಮಗುವಿನ ಜನನ ಹಾಗೂ ಶಿಶುಮರಣ ಸಂಭವಿಸುವ ಸಾಧ್ಯತೆ ಹೆಚ್ಚು ಇರುತ್ತದೆ. ಪ್ರತಿ ವರ್ಷ ವಿಶ್ವದಾದ್ಯಂತ 60 ಲಕ್ಷಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ. ಇಂದಿನ ಯುವ ಪೀಳಿಗೆ ತಂಬಾಕು ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ತಿಳಿಸಿದರು.

 ಯೋಜನಾ ಸಂಯೋಜಕ ಭರಮಪ್ಪ ಅವರು ಮಾತನಾಡಿ, ತಂಬಾಕು ತ್ಯಜಿಸುವುದರಿಂದ ಮತ್ತು ವ್ಯಸನಿಗಳು ನಿಲ್ಲಿಸಿದ ಕ್ಷಣದಿಂದ ಶ್ವಾಸಕೋಶ ಮತ್ತು ಹೃದಯ ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

 ಈ ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತಂಡದ ಸಿಬ್ಬಂದಿ ವರ್ಗದವರು ಮತ್ತು ಅರ್ಥಿಗಳು ಭಾಗವಹಿಸಿದ್ದರು.

ALERT: Smokers beware: Every cigarette or bidi you smoke shortens your life by 7 minutes!
Share. Facebook Twitter LinkedIn WhatsApp Email

Related Posts

ರಾಹುಲ್ ಗಾಂಧಿ ನಮ್ಮ ನಾಯಕರು, ಅವರ ಭೇಟಿ ಹೊಸತಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

15/01/2026 2:59 PM1 Min Read

ಸಾಗರದ ‘ಚೋರಡಿ ಅರಣ್ಯಾಧಿಕಾರಿ’ಗಳ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ಕಡಿತಲೆ ಮಾಡಿದ್ದ ‘ಸಾಗುವಾನಿ ಮರ’ ವಶಕ್ಕೆ

15/01/2026 2:22 PM1 Min Read

ಸ್ಪರ್ಶ್ ಆಸ್ಪತ್ರೆಯಲ್ಲಿ ಕಿಡ್ನಿ ಕಸಿಗೆ ರೊಬೋಟಿಕ್‌ ಶಸ್ತ್ರಚಿಕಿತ್ಸೆ: 75 ವರ್ಷದ ತಾಯಿಯಿಂದ ಮಗನಿಗೆ ಮರುಜೀವ

15/01/2026 2:18 PM2 Mins Read
Recent News

ರಾಹುಲ್ ಗಾಂಧಿ ನಮ್ಮ ನಾಯಕರು, ಅವರ ಭೇಟಿ ಹೊಸತಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

15/01/2026 2:59 PM

ಡಿಜಿಟಲ್ ಚಿನ್ನ vs ಭೌತಿಕ ಚಿನ್ನ: 2026ರಲ್ಲಿ ಯಾವುದು ಬೆಸ್ಟ್? ಇಲ್ಲಿದೆ ಮಾಹಿತಿ | Digital Gold

15/01/2026 2:53 PM

ಸಾಗರದ ‘ಚೋರಡಿ ಅರಣ್ಯಾಧಿಕಾರಿ’ಗಳ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ಕಡಿತಲೆ ಮಾಡಿದ್ದ ‘ಸಾಗುವಾನಿ ಮರ’ ವಶಕ್ಕೆ

15/01/2026 2:22 PM

ಸ್ಪರ್ಶ್ ಆಸ್ಪತ್ರೆಯಲ್ಲಿ ಕಿಡ್ನಿ ಕಸಿಗೆ ರೊಬೋಟಿಕ್‌ ಶಸ್ತ್ರಚಿಕಿತ್ಸೆ: 75 ವರ್ಷದ ತಾಯಿಯಿಂದ ಮಗನಿಗೆ ಮರುಜೀವ

15/01/2026 2:18 PM
State News
KARNATAKA

ರಾಹುಲ್ ಗಾಂಧಿ ನಮ್ಮ ನಾಯಕರು, ಅವರ ಭೇಟಿ ಹೊಸತಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0915/01/2026 2:59 PM KARNATAKA 1 Min Read

ಬೆಂಗಳೂರು : “ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡುವುದು ಹೊಸತೇನಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ…

ಸಾಗರದ ‘ಚೋರಡಿ ಅರಣ್ಯಾಧಿಕಾರಿ’ಗಳ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ಕಡಿತಲೆ ಮಾಡಿದ್ದ ‘ಸಾಗುವಾನಿ ಮರ’ ವಶಕ್ಕೆ

15/01/2026 2:22 PM

ಸ್ಪರ್ಶ್ ಆಸ್ಪತ್ರೆಯಲ್ಲಿ ಕಿಡ್ನಿ ಕಸಿಗೆ ರೊಬೋಟಿಕ್‌ ಶಸ್ತ್ರಚಿಕಿತ್ಸೆ: 75 ವರ್ಷದ ತಾಯಿಯಿಂದ ಮಗನಿಗೆ ಮರುಜೀವ

15/01/2026 2:18 PM

BREAKING : ಹೈಕಮಾಂಡ್ ಮನಸ್ಸು ಮಾಡಿದರೆ ಮಲ್ಲಿಕಾರ್ಜುನ ಖರ್ಗೆ ‘CM’ ಆಗಬಹುದು : ಕೆ.ಹೆಚ್ ಮುನಿಯಪ್ಪ

15/01/2026 1:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.