ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಗರ ತಾಲ್ಲೂಕಿಗೆ ಬಂಪರ್ ಗಿಫ್ಟ್ ಎನ್ನುವಂತೆ 50 ಕೋಟಿ ನೀಡಿದ್ದರು. ಈ ಬೆನ್ನಲ್ಲೇ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಸಾಗರದಲ್ಲಿ ಬರೋಬ್ಬರಿ 50 ಕೋಟಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಜೊತೆ ಜೊತೆಗೆ ಆರ್ಥಿಕ ಇಲಾಖೆಯಿಂದ ಅಧಿಕೃತ ಆದೇಶ ಕೂಡ ಹೊರ ಬಿದ್ದಿದೆ.
ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಸಾಗರ ತಾಲ್ಲೂಕಿನಲ್ಲಿ ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳೋದಕ್ಕೆ ಅನುಮತಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಿಎಂ ಸಿದ್ಧರಾಮಯ್ಯ ಭೇಟಿಯ ವೇಳೆಯಲ್ಲಿ ಮನವಿ ಮಾಡಿದ್ದರು. ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವಂತ ಸಿದ್ಧರಾಮಯ್ಯ, ಬರೋಬ್ಬರಿ 50 ಕೋಟಿ ಅನುದಾನದಲ್ಲಿ ಸಾಗರ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುಮತಿಸಿ ಆದೇಶಿಸಿದ್ದಾರೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ವಿವಿಧ ಇಲಾಖೆಗಳಡಿ ಈ ಕೆಳಕಂಡ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ಅನುಮೋದನೆ ನೀಡಿರುವುದಾಗಿ ಎಂಬುದಾಗಿ ತಿಳಿಸಿದ್ದಾರೆ.
50 ಕೋಟಿಯಲ್ಲಿ ಯಾವೆಲ್ಲ ಇಲಾಖೆಯಡಿ ಸಾಗರ ತಾಲ್ಲೂಕಲ್ಲಿ ಅಭಿವೃದ್ಧಿ ಗೊತ್ತಾ?
- ಲೋಕೋಪಯೋಗಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಸಾಗರದಲ್ಲಿ ಕೈಗೆತ್ತಿಕೊಳ್ಳಲು 12 ಕೋಟಿ ನೀಡಲಾಗಿದೆ.
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಭಿವೃದ್ಧಿ ಕಾಮಗಾರಿಯನ್ನು ಸಾಗರ ತಾಲ್ಲೂಕಿನಲ್ಲಿ ಕೈಗೊಳ್ಳಲು 29.25 ಕೋಟಿ ಅನುದಾನ ನೀಡಲಾಗಿದೆ.
- ಹಿಂದುಳಿದ ವರ್ಗಗಳ ಇಲಾಖೆಯಿಂದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 5.25 ಕೋಟಿ ನೀಡಲಾಗಿದೆ.
- ಮುಜರಾಯಿ ಇಲಾಖೆಯಿಂದ ಅಭಿವೃದ್ಧಿ ಕಾಮಗಾರಿಯನ್ನು ಸಾಗರದಲ್ಲಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ಸಿದ್ಧರಾಮಯ್ಯ 3.50 ಕೋಟಿ ನೀಡಿದ್ದಾರೆ.
ಒಟ್ಟಾರೆಯಾಗಿ ಸಾಗರ ತಾಲ್ಲೂಕಿನಲ್ಲಿ ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಮುಜರಾಯಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಬರೋಬ್ಬರಿ 50 ಕೋಟಿ ಅನುದಾನದಲ್ಲಿ ಕೈಗೆತ್ತಿಕೊಳ್ಳಲು ಸಿಎಂ ಸಿದ್ಧರಾಮಯ್ಯ ಟಿಪ್ಪಣಿಯ ಹಿನ್ನಲೆಯಲ್ಲಿ ಆರ್ಥಿಕ ಇಲಾಖೆಯು ಅಧಿಕೃತ ಆದೇಶ ಮಾಡಿ ಗ್ರೀನ್ ಸಿಗ್ನಲ್ ನೀಡಿದೆ.
ವರದಿ; ವಸಂತ ಬಿ ಈಶ್ವರಗೆರೆ., ಸಂಪಾದಕರು

BREAKING: ಗ್ಯಾಂಗ್ ಸ್ಟರ್ ಅನ್ಮೋಲ್ ಬಿಷ್ಣೋಯ್ ಬಂಧಿಸಿದ ಮೊದಲ ಪೋಟೋ ರಿಲೀಸ್ ಮಾಡಿದ NIA
ALERT : ತೊಳೆಯದ `ತಲೆದಿಂಬು’ ಬಳಸುವವರೇ ಎಚ್ಚರ : ಇದರಲ್ಲಿವೆ `ಟಾಯ್ಲೆಟ್ ಸೀಟ್’ ಗಿಂತ ಡೇಂಜರ್ ಬ್ಯಾಕ್ಟೀರಿಯಾ.!








