ಮಂಡ್ಯ : ದುಷ್ಕರ್ಮಿಗಳು ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ನಲ್ಲಿ ದರೋಡೆಗೆ ಯತ್ನಿಸಿರುವ ಘಟನೆ ಮದ್ದೂರು ತಾಲೂಕಿನ ಬಿದರಕೋಟೆ ಗ್ರಾಮದಲ್ಲಿ ನಡೆದಿದೆ.
ದುಷ್ಕರ್ಮಿಗಳು ಮಂಗಳವಾರ ತಡರಾತ್ರಿ ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್‌ನ ಸಿಸಿ ಕ್ಯಾಮರಾ ಹೊಡೆದು ಹಾಕಿ ನಂತರ ಬಾಗಿಲಿಗೆ ಹಾಕಿದ್ದ ಬೀಗ ಒಡೆದು ಒಳಗೆ ನುಗ್ಗಿ ಲಾಕರ್ ಒಡೆಯಲು ಯತ್ನ ಮಾಡಿದ್ದಾರೆ. ಆದರೆ ಲಾಕರ್ ಒಡೆಯಲು ಸಾಧ್ಯವಾಗದೇ ದುಷ್ಕರ್ಮಿಗಳು ಬರಿಗೈಯಲ್ಲಿ ವಾಪಸಾಗಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ನಾರಾಯಿಣಿ ಹಾಗೂ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನು ಶ್ವಾನ ದಳ, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸುತ್ತಿದ್ದು, ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇನ್ನು ಫೆ.25 ರಂದು ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದ ಬ್ಯಾಂಕ್ ಆಫ್ ಬರೋಡಾ ದಲ್ಲೂ ಕಳ್ಳರು ದರೋಡೆಗೆ ಯತ್ನಿಸಿದ್ದು, ಕಂಡು ಬಂದಿತು.
ವರದಿ : ಗಿರೀಶ್ ರಾಜ್, ಮಂಡ್ಯ
ಬೆಂಗಳೂರು ಜನತೆ ಗಮನಕ್ಕೆ: ನ.27ರಿಂದ ‘ಕಬ್ಬನ್ ಪಾರ್ಕ್’ನಲ್ಲಿ ‘ಪುಷ್ಪ ಪ್ರದರ್ಶನ’
ALERT : ತೊಳೆಯದ `ತಲೆದಿಂಬು’ ಬಳಸುವವರೇ ಎಚ್ಚರ : ಇದರಲ್ಲಿವೆ `ಟಾಯ್ಲೆಟ್ ಸೀಟ್’ ಗಿಂತ ಡೇಂಜರ್ ಬ್ಯಾಕ್ಟೀರಿಯಾ.!








