Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚೀನಾದಲ್ಲಿ ಭೀಕರ ದುರಂತ : ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು

SHOCKING : ಬೆಂಗಳೂರಲ್ಲಿ ನಡು ರಸ್ತೆಯಲ್ಲೇ, ಕಾರಿನಿಂದ ಹೊರಗೆಳೆದು ಉಬರ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

ALERT : ‘ಜಂಕ್ ಫುಡ್’ ಸೇವಿಸುವ ಯುವಜನರಲ್ಲಿ ಹೃದಯಾಘಾತದ ಅಪಾಯ ಶೇ. 100 ರಷ್ಟು ಹೆಚ್ಚಳ ; ಅಧ್ಯಯನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಮೀಸಲಾತಿ ಪ್ರಮಾಣ ಶೇ.75ಕ್ಕೆ ಹೆಚ್ಚಿಸಲು ಆಸಕ್ತಿ : CM ಸಿದ್ದರಾಮಯ್ಯ
KARNATAKA

BIG NEWS : ರಾಜ್ಯದಲ್ಲಿ ಮೀಸಲಾತಿ ಪ್ರಮಾಣ ಶೇ.75ಕ್ಕೆ ಹೆಚ್ಚಿಸಲು ಆಸಕ್ತಿ : CM ಸಿದ್ದರಾಮಯ್ಯ

By kannadanewsnow57

ಬೆಂಗಳೂರು : ನಮ್ಮ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಒಪ್ಪಿಕೊಂಡು ಜಾರಿ ಮಾಡಲು ಸಿದ್ಧವಿದೆ. ಮೀಸಲಾತಿ ಪ್ರಮಾಣವನ್ನು ಶೇ 70-75 ಕ್ಕೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ “ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಂದುಳಿದವರು, ದಲಿತರು ಸೇರಿದಂತೆ ಶೂದ್ರ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ – ಆರ್.ಎಸ್.ಎಸ್ – ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು? ಬಿಜೆಪಿ – ಆರ್.ಎಸ್.ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರಲ್ಲಾ ಇದಕ್ಕೇನು ಮಾಡೋದು?
ದೇವರು, ಧರ್ಮದ ಹೆಸರಲ್ಲಿ ಸಾಯುತ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ ಬಿಜೆಪಿ – ಆರ್.ಎಸ್.ಎಸ್ ಸೇರಿ ಇವರೇ ಮೂಲ ಆರ್.ಎಸ್.ಎಸ್ ನವರಿಗಿಂತ, ಹೆಡಗೆವಾರ್ ರೀತಿ ಮಾತಾಡ್ತಾರೆ.

ಹಾವನೂರು ವರದಿಯನ್ನು ದೇವರಾಜ ಅರಸರು ಹಿಂದುಳಿದವರ ಬೈಬಲ್ ಎಂದು ಕರೆದಿದ್ದಾರೆ. ಸುಪ್ರೀಂಕೋರ್ಟ್ ಕೂಡ ಹಾವನೂರು ವರದಿಯನ್ನು ಅಪಾರವಾಗಿ ಮೆಚ್ಚಿಕೊಂಡಿದೆ. ಸಾಮಾನ್ಯ ಹಳ್ಳಿಯ ಪರಿಶಿಷ್ಟ ಕುಟುಂಬದಲ್ಲಿ ಹುಟ್ಟಿದ ಹಾವನೂರು ಅವರು ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭಟನೆ ಮಾಡುವ ಗುಣ ಹೊಂದಿದ್ದರು. ಹಾವನೂರು ಅವರು ಬೇಡರ ಜಾತಿಯ ಮೊದಲ ವಕೀಲರಾಗಿದ್ದರು.

ನಾನು ಹಣಕಾಸು ಮಂತ್ರಿಯಾದಾಗ, “ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ” ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ. ನನಗೆ ಅವಕಾಶ ಸಿಕ್ಕಿದ್ದರಿಂದ ನಾನು ಇಷ್ಟೆಲ್ಲಾ ಮಾಡಲು ಸಾಧ್ಯವಾಯಿತು. ಅವಕಾಶ ಸಿಗದಿದ್ದರೆ ನನ್ನಿಂದ ಇದನ್ನು ಮಾಡಲು ಸಾಧ್ಯವಿರಲಿಲ್ಲ. ಆದ್ದರಿಂದ ದಮನಿತ ಜಾತಿಗಳಿಗೆ ಅವಕಾಶ ಮುಖ್ಯ.

ಬೇಡರ ಜಾತಿಯಲ್ಲಿ ಜನಿಸಿದ ಹಾವನೂರು ಅವರು ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕಾಗ ಹೊರಗೆ ಬರುತ್ತದೆ.
ನಾನು 1991 ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದೆ. ಆಗ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದೆ. ನನ್ನ ಅರ್ಜಿ ಪರವಾಗಿ ಹಾವನೂರು ಅವರು ವಾದಿಸಿದ್ದರು. ಆ ಸಂದರ್ಭದಲ್ಲಿ ನಾನು ಹಾವನೂರು ಅವರ ಜೊತೆ ಆತ್ಮೀಯತೆ ಬೆಳೆದಿತ್ತು.

ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇರಬೇಕು ಎನ್ನುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತಾಗಿತ್ತು. ನಮ್ಮಲ್ಲಿ ಶಿಕ್ಷಣ ಪ್ರಮಾಣ ಶೇ68 ರಷ್ಟಿದ್ದರೂ ಜಾತಿ ವ್ಯವಸ್ಥೆ ಇನ್ನಷ್ಟು ಗಟ್ಟಿಯಾಗುತ್ತಿದೆ. ಜಾತಿ ವ್ಯವಸ್ಥೆಯಿಂದ ಅನುಕೂಲ ಮಾಡಿಕೊಂಡವರು ಈ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತಿದ್ದಾರೆ. ಹಿಂದುಳಿದವರು ಇನ್ನೂ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ. ಮೇಲು ಜಾತಿಯ ಬಡವರನ್ನೂ ಬಹುವಚನದಿಂದ ಕರೆಯುವುದು, ಕೆಳ ಜಾತಿಯ ಶ್ರೀಮಂತರನ್ನು ಏಕವಚನದಲ್ಲಿ ಕರೆಯುವುದೇ ಗುಲಾಮಿ ಮನಸ್ಥಿತಿಯ ಸಂಕೇತ.

ನಮ್ಮ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಒಪ್ಪಿಕೊಂಡು ಜಾರಿ ಮಾಡಲು ಸಿದ್ಧವಿದೆ. ಮೀಸಲಾತಿ ಪ್ರಮಾಣವನ್ನು ಶೇ 70-75 ಕ್ಕೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದೆ. ನನಗೆ ಕೊನೆಯ ಉಸಿರು ಇರುವವರೆಗೂ, ನಾನು ರಾಜಕಾರಣದಲ್ಲಿ ಇರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ. ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ದೇಶಾದ್ಯಂತ ಜಾತಿ ಗಣತಿಗೆ ಒತ್ತಡ ಹೇರಿದರು. ಮೊನ್ನೆ ನನಗೂ “ಏನಾಯ್ತು ನಿಮ್ಮ ಗಣತಿ” ಎಂದು ಕೇಳಿದರು. ರಾಹುಲ್ ಗಾಂಧಿಯವರಿಗೆ ಸ್ಪಷ್ಟತೆ ಇರುವುದರಿಂದಲೇ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಜಾತಿ ಗಣತಿ ನಡೆಸುವಂತೆ ಮಾಡಿದ್ದಾರೆ. ನಮ್ಮ ಸರ್ಕಾರ ಕೂಡ ಈ ಗಣತಿಯನ್ನು ಒಪ್ಪಿಕೊಂಡು ಜಾರಿ‌ಮಾಡಲು ಬದ್ಧವಾಗಿದೆ ಎಂದರು.

ಹಿಂದುಳಿದವರು, ದಲಿತರು ಸೇರಿದಂತೆ ಶೂದ್ರ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ – ಆರ್.ಎಸ್.ಎಸ್ – ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು? ಬಿಜೆಪಿ – ಆರ್.ಎಸ್.ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರಲ್ಲಾ ಇದಕ್ಕೇನು ಮಾಡೋದು?

ದೇವರು, ಧರ್ಮದ ಹೆಸರಲ್ಲಿ ಸಾಯುತ್ತಾ ಇರೋರೆಲ್ಲಾ… pic.twitter.com/Fi9vZ7OQ8V

— Siddaramaiah (@siddaramaiah) November 19, 2025

BIG NEWS : CM Siddaramaiah interested in increasing reservation ratio in state to 75 per cent
Share. Facebook Twitter LinkedIn WhatsApp Email

Related Posts

SHOCKING : ಬೆಂಗಳೂರಲ್ಲಿ ನಡು ರಸ್ತೆಯಲ್ಲೇ, ಕಾರಿನಿಂದ ಹೊರಗೆಳೆದು ಉಬರ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

2 Mins Read

GOOD NEWS : ರಾಜ್ಯದ `LKG-10ನೇ ತರಗತಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರದ 6 ದಿನವೂ ಮೊಟ್ಟೆ/ಬಾಳೆಹಣ್ಣು ವಿತರಣೆಗೆ ಶಿಕ್ಷಣ ಇಲಾಖೆ ಆದೇಶ

2 Mins Read

BIG NEWS : ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

2 Mins Read
Recent News

BREAKING : ಚೀನಾದಲ್ಲಿ ಭೀಕರ ದುರಂತ : ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು

SHOCKING : ಬೆಂಗಳೂರಲ್ಲಿ ನಡು ರಸ್ತೆಯಲ್ಲೇ, ಕಾರಿನಿಂದ ಹೊರಗೆಳೆದು ಉಬರ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

ALERT : ‘ಜಂಕ್ ಫುಡ್’ ಸೇವಿಸುವ ಯುವಜನರಲ್ಲಿ ಹೃದಯಾಘಾತದ ಅಪಾಯ ಶೇ. 100 ರಷ್ಟು ಹೆಚ್ಚಳ ; ಅಧ್ಯಯನ

GOOD NEWS : ರಾಜ್ಯದ `LKG-10ನೇ ತರಗತಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರದ 6 ದಿನವೂ ಮೊಟ್ಟೆ/ಬಾಳೆಹಣ್ಣು ವಿತರಣೆಗೆ ಶಿಕ್ಷಣ ಇಲಾಖೆ ಆದೇಶ

State News
KARNATAKA

SHOCKING : ಬೆಂಗಳೂರಲ್ಲಿ ನಡು ರಸ್ತೆಯಲ್ಲೇ, ಕಾರಿನಿಂದ ಹೊರಗೆಳೆದು ಉಬರ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡ-ಪೋಕರಿಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರ ಭದ್ರತೆಗೆ ಧಕ್ಕೆ ತರುವಂತಹ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ…

GOOD NEWS : ರಾಜ್ಯದ `LKG-10ನೇ ತರಗತಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರದ 6 ದಿನವೂ ಮೊಟ್ಟೆ/ಬಾಳೆಹಣ್ಣು ವಿತರಣೆಗೆ ಶಿಕ್ಷಣ ಇಲಾಖೆ ಆದೇಶ

BIG NEWS : ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

BIG NEWS : ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ ಮಾಡಿ ಸರ್ಕಾರ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.