ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಭರ್ಜರಿ ಗೆಲುವು ಸಾಧಿಸಿತ್ತು. ಈ ಬೆನ್ನಲ್ಲೇ ನವೆಂಬರ್.20ರ ಇಂದು ಬಿಹಾರದಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ. ಸತತ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಿಹಾರದಲ್ಲಿ ನವೆಂಬರ್.20ರಂದು ಬೆಳಗ್ಗೆ 11ರಿಂದ 12ರವರೆಗೆ ನೂತನ ಸರ್ಕಾರ ಪದಗ್ರಹಣ ಸಮಾರಂಭ ನಡೆಯಲಿದೆ. ಬಿಹಾರದ ಪಾಟ್ನಾದ ಗಾಂಧಿ ಮೈದಾನದಲ್ಲಿ 10ನೇ ಬಾರಿ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬಿಹಾರದಲ್ಲಿ ನೂತನ ಸರ್ಕಾರ ಅಸ್ಥಿತ್ವದ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
243 ಸದಸ್ಯ ಬಲದ ವಿಧಾನಸಭೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗಳಿಸುವ ಮೂಲಕ ಬಹುಮತ ಗಳಿಸಿತು, ಬಿಜೆಪಿ ಗರಿಷ್ಠ 89 ಸ್ಥಾನಗಳನ್ನು ಗೆದ್ದಿತು, ನಂತರ ಜೆಡಿ (ಯು) 85 ಸ್ಥಾನಗಳನ್ನು ಗಳಿಸಿತು. ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ (ಆರ್‌ವಿ) 19 ಸ್ಥಾನಗಳನ್ನು ಗೆದ್ದುಕೊಂಡಿತು ಮತ್ತು ಇನ್ನೂ ಒಂಬತ್ತು ಸ್ಥಾನಗಳನ್ನು ಸಣ್ಣ ಪಾಲುದಾರರಾದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ಗೆದ್ದವು. ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು.








