ಗದಗ : ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ಇಂದು ಲಕ್ಷ್ಮೇಶ್ವರ ತಾಲೂಕು ಬಂದ್ ಗೆ ಕರೆ ನೀಡಲಾಗಿದ್ದು ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಲಕ್ಷ್ಮೇಶ್ವರ ತಾಲೂಕು ಬಂದ್ ಹಿನ್ನೆಲೆಯಲ್ಲಿ ಇಂದು ಲಕ್ಷ್ಮೇಶ್ವರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಆದೇಶ ಹೊರಡಿಸಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತಪರ ಹೋರಾಟಗಾರರು ಇಂದು ಲಕ್ಷ್ಮೇಶ್ವರ ಬಂದ್ ಗೆ ಕರೆ ನೀಡಿದ್ದಾರೆ. ಹೋರಾಟಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು, ಸಂಘ-ಸಂಸ್ಥೆಗಳು ಬೆಂಬಲ ನೀಡಿವೆ.








