ದಕ್ಷಿಣ ಕನ್ನಡ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಂತ ವಿಶೇಷ ತನಿಖಾ ದಳದ(ಎಸ್ಐಟಿ) ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದಂತ ಎಸ್ಐಟಿ ಅಧಿಕಾರಿಗಳ ತಂಡವು ಸುಳ್ಳು ಸಾಕ್ಷ್ಯ, ವರದಿಯನ್ನೂ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಚಾರ್ಜ್ ಶೀಟ್ ಹಾಗೂ ಸುಳ್ಳು ಸಾಕ್ಷ್ಯ ವರದಿಯನ್ನು ಎಸ್ಐಟಿ ಅಧಿಕಾರಿಗಳು ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
7 ಫೈಲ್ ಗಳಲ್ಲಿ ವರದಿ ತಯಾರು ಮಾಡಿದ್ದಂತ ಎಸ್ಐಟಿ ಅಧಿಕಾರಿಗಳು, ಅದನ್ನು ಇಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಎಸ್ಐಟಿ ಟೀಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಸುಜಾತ ಭಟ್, ವಿಠಲ್ ಗೌಡ ಸೇರಿದಂತೆ 6 ಮಂದಿ ವಿರುದ್ಧ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಸಿಸಿದೆ ಎನ್ನಲಾಗುತ್ತಿದೆ.
BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕಿಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ
ನಾನು ‘ಜೆಡಿಎಸ್’ನಲ್ಲೇ ಇದ್ದಿದ್ದರೆ ‘ಮುಖ್ಯಮಂತ್ರಿ’ ಆಗುತ್ತಿರಲಿಲ್ಲ: ಸಿದ್ದರಾಮಯ್ಯ







