ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿಯನ್ನು ಮತ್ತೆ ನೀಡಿ ಸರ್ಕಾರ ಆದೇಶಿಸಿದೆ. ಶೇ.50ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಕಾಲಾವಕಾಶವನ್ನು ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದಿದ್ದಾರೆ.
ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದು ಹೇಳಿದ್ದಾರೆ.
ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು ಎಂದಿದ್ದಾರೆ.
ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು ಎಂದು ಹೇಳಿದ್ದಾರೆ.
ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ (ಕನಿಷ್ಠ 1991 ರಿಂದ 2020 ರವರೆಗೆ) ದಾಖಲಾಗಿರುವ ಪುಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಈ 50% ವಿನಾಯಿತಿಯನ್ನು ದಿನಾಂಕ:10.11.2025ರಿಂದ 12.12.2025ರವರೆಗಿನ ನಿರ್ದಿಷ್ಟ ಅವಧಿಗೆ ವಿಸ್ತರಿಸಲು ಕೋರಿರುತ್ತಾರೆ ಎಂದಿದ್ದಾರೆ.
ಪ್ರಸ್ತಾವನೆಯಲ್ಲಿ, ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರ ಪೊಲೀಸ್ ಇಲಾಖೆಯ e-challan ಗಳಲ್ಲಿ ಶೇ 50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 1991 ಯಿಂದ 2020 ರ ಸಾಲಿನಲ್ಲಿ ದಾಖಲಾಗಿರುವ ಪುಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ 50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದು ಹೇಳಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್‌ನಲ್ಲಿ ದಾಖಲಾಗಿರುವ ದಂಡದ ಪುಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ದಾಖಲಾಗಿ, ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ದಿನಾಂಕ:21.11.2025 ರಿಂದ ದಿನಾಂಕ:12.12.2025 ರವರೆಗೆ ಕಾಲಾವಕಾಶ ನೀಡಿ ಆದೇಶಿಸಿದ್ದಾರೆ.
ಈ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ಸಂಖ್ಯೆ ಆಇ 52 ವೆಚ್ಚ-11 2023 (ಇ), ದಿನಾಂಕ:19.11.2025 ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಿದೆ ಎಂದಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ…, ಸಂಪಾದಕರು.

ಬೆಂಗಳೂರಿನ ಬಸನವಗುಡಿಯ ‘ಕಡಲೆಕಾಯಿ ಪರಿಷೆ’ಗೆ ಭರ್ಜರಿ ರೆಸ್ಪಾನ್ಸ್: 3 ದಿನಗಳಲ್ಲೇ 6 ಲಕ್ಷಕ್ಕೂ ಹೆಚ್ಚು ಜನರು ಭಾಗಿ
ALERT : ಈ `ಪಾಸ್ ವರ್ಡ್’ಗಳನ್ನು ಬಳಸಿದ್ರೆ ನಿಮ್ಮ `ಡೇಟಾ ಲೀಕ್’ ಆಗಬಹುದು ಎಚ್ಚರ.!








