ನವದೆಹಲಿ : ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಮಾರಕ ಸ್ಫೋಟಕ್ಕೆ ಸಂಬಂಧಿಸಿದಂತೆ ಗುರುವಾರ ಪಟಿಯಾಲ ಹೌಸ್ ನ್ಯಾಯಾಲಯವು ಡಾ. ಮುಜಮ್ಮಿಲ್ ಗನೈ, ಶಾಹೀನ್ ಶಾಹಿದ್ ಮತ್ತು ಇತರ ಇಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯ 10 ದಿನಗಳ ಕಸ್ಟಡಿಗೆ ನೀಡಿದೆ.
“ವೈಟ್-ಕಾಲರ್ ಭಯೋತ್ಪಾದನಾ ಮಾಡ್ಯೂಲ್” ಪ್ರಕರಣಕ್ಕೆ ಸಂಬಂಧಿಸಿದಂತೆ ಮುಜಮ್ಮಿಲ್ ಗನೈ, ಅದೀಲ್ ರಾಥರ್, ಶಾಹೀನ್ ಶಾಹಿದ್ ಮತ್ತು ಮೌಲ್ವಿ ಇರ್ಫಾನ್ ಅಹ್ಮದ್ ವಾನನ್ನ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಹಿಂದೆ ಬಂಧಿಸಿದ್ದರು. ಪಟಿಯಾಲ ಹೌಸ್ ನ್ಯಾಯಾಲಯದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರ ಪ್ರೊಡಕ್ಷನ್ ಆದೇಶದ ಮೇರೆಗೆ ಭಯೋತ್ಪಾದನಾ ನಿಗ್ರಹ ತನಿಖಾ ಸಂಸ್ಥೆ ಅವರನ್ನು ಶ್ರೀನಗರದಲ್ಲಿ ವಶಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.
ನೇಪಾಳದಲ್ಲಿ ಮತ್ತೆ ಭುಗಿಲೆದ್ದ ‘Gen Z’ ಪ್ರತಿಭಟನೆ, ದೇಶದ ಹಲವು ಭಾಗಗಳಲ್ಲಿ ಕರ್ಫ್ಯೂ ಹೇರಿಕೆ ; ವಿಡಿಯೋ ನೋಡಿ!
ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್








