ಬೆಂಗಳೂರು :ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ವಾಯತ್ತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ನೌಕರರು ಕೆ.ಜಿ.ಐ.ಡಿ. ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಹೆಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿ ಅವಕಾಶ ಕಲ್ಪಿಸುವ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ.
ವಿಷಯಕ್ಕೆ ಸಂಬಂಧಿಸಿದಂತೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ವಾಯತ್ತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ವೃಂದದ ಅಧಿಕಾರಿ/ನೌಕರರು ಎದುರಿಸುತ್ತಿರುವ ಈ ಕೆಳಕಂಡ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ತಮ್ಮಲ್ಲಿ ಕೋರಿದೆ.
ಕೆ.ಜಿ.ಐ.ಡಿ. ಸಂಖ್ಯೆಯನ್ನು ಹೊಂದಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ನೌಕರರ KGID ಸಂಖ್ಯೆಗೆ ಬದಲಾಗಿ Employee No. ನೀಡಲಾಗುತ್ತಿದ್ದು, KGID ಸಂಖ್ಯೆಯನ್ನೇ ನೌಕರರ Pay Slip ನಲ್ಲಿ ನಮೂದಿಸುವುದು.
ಸ್ವಾಯತ್ತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ KGID. ವಂತಿಕೆ ಹಣ ಕಟಾವು ಮಾಡಲಾಗುತ್ತಿದ್ದು, ಕಟಾವು ಮಾಡಲಾದ ವಂತಿಗೆ ಹಣ ಯಾವ ಬಾಬ್ರಿಗೆ ಕಟಾವಣೆ ಮಾಡಲಾಗಿದೆ ಎಂಬುದನ್ನು Pay Slip ನಲ್ಲಿ ಸ್ಪಷ್ಟವಾಗಿ ನಮೂದಿಸುವುದು.
ಸರ್ಕಾರವು ಇತ್ತೀಚೆಗೆ ಜಾರಿಗೊಳಿಸಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ”ಗೆ ಸೇರ್ಪಡೆಗೊಳ್ಳಲು ಸ್ವಾಯತ್ತ ಸಂಸ್ಥೆಗಳಲ್ಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ನೌಕರರಿಗೆ ಅವಕಾಶ ಕಲ್ಪಿಸುವುದು.
ಮೇಲ್ಕಂಡ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಹೆಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿ ಅಳವಡಿಸುವುದು.









