ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಶಿವಪುರ ಸಮೀಪದ ನವಿಲುಗುಡ್ಡದ ಬಂಡೆಯ ಬಳಿ ತೋಟದ ಮನೆಯ ಎದುರು ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದ ಘಟನೆ ನಡೆದಿದೆ.
ಬೆಂಗಳೂರಿನ ರಾಮಚಂದ್ರಪ್ಪ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ ಧಾರವಾಡದ ಈ ದಂಪತಿ ಕೆಲಸ ಮಾಡಿಕೊಂಡಿದ್ದಾರೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದಿದ್ದು, ಸದ್ಯ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಬಸವರಾಜ ಮತ್ತು ರೇಣುಕಾ ದಂಪತಿಯ ಪುತ್ರಿ ಸಾನ್ವಿಯನ್ನು ಚಿರತೆ ಹೊತ್ತೊಯ್ದಿದಿತ್ತು. ಇದೀಗ ಪೊಲೀಸರು ಮತ್ತು ಅರಣ್ಯಇಲಾಖೆ ಸಿಬ್ಬಂದಿಗಳು ಬಾಲಕಿಯ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ.








