ಬೆಳಗಾವಿ : ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಗಳಲ್ಲಿ ಕೃಷ್ಣಮೃಗಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಸಾಕು ಪ್ರಾಣಿಗಳಿಗೂ ಗಳಲೆ ರೋಗ ಹರಡುತ್ತಿದೆ. ಸಾಕು ಪ್ರಾಣಿಗಳಿಗೆ ಹಿಮೋರೆಜಿಕ್ ಸೇಪ್ಟಿಸೀಮಿಯ ಸೋಂಕು ಹರಡುತ್ತಿದೆ.
ಹೌದು ಇತ್ತೀಚಿಗೆ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳ ಸಾವನಪ್ಪಿದ್ದವು ಬೆಳಗಾವಿ ತಾಲೂಕಿನ ಭೂತ ರಾಮನ ಹಟ್ಟಿ ಬಳಿ ಇರುವ ಕಿರು ಮೃಗಾಲಯದಲ್ಲಿ ಸಾವನ್ನಪ್ಪಿದ್ದವೇ ಎಚ್.ಎಸ್ ಬ್ಯಾಕ್ಟೀರಿಯಾ ಸೋಂಕಿನಿಂದ ರೈತರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಗಂಟು ರೋಗದಿಂದ ಈಗಾಗಲೇ ಏಳು ಜಾನುವಾರುಗಳು ಸಾವನ್ನಪ್ಪಿದ್ದು ಮೃತ ಜಾನುವಾರುಗಳಿಗೆ ಹಿಮೋರೆಜಿಕ್ ಸೇಪ್ಟಿಸೀಮಿಯ ಸೋಂಕು ತಗುಲಿರುವ ಹಿನ್ನೆಲೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.








