ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾ. ಮೈಕೆಲ್ ಕುನ್ಹಾ ಅವರ ತನಿಖಾ ವರದಿಯನ್ನು ಪ್ರಶ್ನಿಸಿ ‘ಡಿಎನ್‌ಎ’ ನೆಟ್‌ವರ್ಕ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಡಿಎನ್ಎ ನೆಟ್ವರ್ಕ್ ಸಲ್ಲಿಸಿದ ಅರ್ಜಿಯನ್ನು ವಜಾ ಗೊಳಿಸಿ ಆದೇಶ ಹೊರಡಿಸಿದೆ.
ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಗೆ ರಚಿಸಲಾದ ಏಕಸದಸ್ಯ ಆಯೋಗದ ವರದಿಯನ್ನು ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದರು.
ಈ ವರದಿಯಲ್ಲಿ ಪೊಲೀಸರ ವೈಫಲ್ಯ ಮತ್ತು ಆಯೋಜಕರ ತಪ್ಪನ್ನು ಉಲ್ಲೇಖಿಸಲಾಗಿತ್ತು, ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿತ್ತು. ಈ ವರದಿಯನ್ನು ಪ್ರಶ್ನಿಸಿ, ಅದನ್ನು ರದ್ದುಗೊಳಿಸುವಂತೆ ಕೋರಿ ‘ಡಿಎನ್‌ಎ’ ಎಂಟರ್‌ಟೇನ್‌ಮೆಂಟ್ ನೆಟ್‌ವರ್ಕ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಆದರೆ ವಿಚಾರಣೆ ನಡೆಸಿದ ಹೈ ಕೋರ್ಟ್ ಇದೀಗ ಡಿಎನ್ಎ ನೆಟ್ವರ್ಕ್ ಅರ್ಜಿಯನ್ನು ವಜಾ ಗೊಳಿಸಿದೆ.








