ಮೈಸೂರು : ಮೆಕ್ಕೆಜೋಳ ವಿಚಾರವಾಗಿ ಇಂದು ಸಭೆ ನಡೆಸಿದ್ದೇನೆ. ಕರ್ನಾಟಕ ರಾಜ್ಯದಲ್ಲಿ 55 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆಯಲಾಗಿದೆ. ಕೇಂದ್ರ ಸರ್ಕಾರ ರೈತರಿಂದ ಮೆಕ್ಕೆಜೋಳ ಖರೀದಿಸಬೇಕಾಗಿತ್ತು ಎಂದು ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಮೆಕ್ಕೆಜೋಳ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈತರಿಂದ ಮೆಕ್ಕೆಜೋಳ ಖರೀದಿಸಬೇಕಾಗಿತ್ತು ಎಂ ಎಸ್ ಪಿ ದರ ನಿಗದಿ ಮಾಡಿ ಕೇಂದ್ರ ಸರ್ಕಾರ ಖರೀದಿ ಮಾಡಬೇಕಾಗಿತ್ತು. ಕೇಂದ್ರ ಸರ್ಕಾರ 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಆಮದು ಮಾಡಿಕೊಳ್ಳುತ್ತಿದೆ.
ನಮ್ಮ ರಾಜ್ಯದಲ್ಲೇ 5 ಲಕ್ಷ ಮೆಟ್ರಿಟನ್ ಬೆಳೆಯಲಾಗಿದೆ ಹಾಗಾಗಿ ಕೇಂದ್ರ ಸರ್ಕಾರ ರೈತರಿಂದ ಮೆಕ್ಕೆಜೋಳ ಖರೀದಿಸಬೇಕಾಗಿತ್ತು. ಡಿಸ್ಟಲರಿ ರೈತರಿಂದ ಮೆಕ್ಕೆಜೋಳ ಖರೀದಿ ಮಾಡಬೇಕಾಗಿತ್ತು ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಸಿಗುತ್ತಿರುವುದರಿಂದ ಖರೀದಿಸಬೇಕಾಗಿತ್ತು. ಡಿಸ್ಟಲರಿಗಳು ಮುಕ್ತ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಖರೀದಿಸಿದೆ ಎಂದು ತಿಳಿಸಿದರು.








