ಮೈಸೂರು : ಕಳೆದ ಎರಡು ದಿನಗಳ ಹಿಂದೆ ಅಷ್ಟೇ ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಬಜೆಟ್ ಸಹ ನಾನೇ ಮಾಡಿಸುತ್ತೇನೆ ಎಂದು ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ಕೂಡ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಮುಂದಿನ ಬಜೆಟ್ ಸಹ ನಾನೇ ಮಾಡಿಸುತ್ತೇನೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಎಂ ಆಗಿ ನಾನೇ ಮುಂದುವರಿಯುತ್ತೇನೆ . ನಾನೇ ಬಜೆಟ್ ಮಂಡಿಸುತ್ತೇನೆ. ನಾಯಕತ್ವ ಬದಲಾವಣೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾಯಕತ್ವದ ಬದಲಾವಣೆ ಮತ್ತು ಸಂಪುಟ ಪುನಾರಚನೆಯ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತಾರೆ ಎಂದು ತಿಳಿಸಿದರು.
ಅಂತಿಮವಾಗಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಅದಕ್ಕೆ ನಾವೆಲ್ಲ ಬದ್ದರಾಗಿದ್ದೇವೆ. ಹೈಕಮಾಂಡ್ ತೀರ್ಮಾನವನ್ನು ನಾನು ಕೇಳಬೇಕು. ಸಚಿವ ಚೆಲುವರಾಯಸ್ವಾಮಿ ದೆಹಲಿಗೆ ಹೋಗಿದ್ದಾರೋ ಇಲ್ಲವೋ ನನಗೆ ಗೊತ್ತಿಲ್ಲ ಅವರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ನಾನು ಮಾತನಾಡಿದ್ದೇನೆ ಕೇಂದ್ರ ಸಚಿವರ ಜೊತೆಗೆ ಭೇಟಿಗೆ ಹೋಗಿರುವ ಬಗ್ಗೆ ನನಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.








