ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಸಮೀಪ ಚಿರತೆಯೊಂದು ಪ್ರತ್ಯಕ್ಷ ಆಗಿದೆ. ಇದರಿಂದ ಸ್ಥಳೀಯ ಜನರಲ್ಲಿ ಚಿರತೆ ಪ್ರತ್ಯಕ್ಷ ಆಗಿರುವ ಕಾರಣ ಆತಂಕ ಹೆಚ್ಚಾಗಿದೆ.
ಚಿಕ್ಕರಾಂಪುರದಿಂದ ಅಂಜನಹಳ್ಳಿಗೆ ಹೋಗುವ ಮಾರ್ಗ ಮಧ್ಯದ ಬೆಟ್ಟದಲ್ಲಿ ಚಿರತೆ ಕಂಡುಬಂದಿದೆ. “ಕಳೆದ 15 ದಿನದಲ್ಲಿ ಮೂರನೇ ಬಾರಿಗೆ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಅಂಜನಾದ್ರಿಯಲ್ಲಿ ಡಿಸಂಬರ್ 2 ಮತ್ತು 3ರಂದು ಹನುಮ ಮಾಲೆ ನಡೆಯಲಿದೆ. ಇದಕ್ಕಾಗಿ ರಾಜ್ಯದ ನಾನಾ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ಇದರ ತಯಾರಿ ಮಧ್ಯೆ ಹನುಮ ಮಾಲೆ ನಡೆಯಲಿರುವ ಜಾಗದ ಸನಿಹದಲ್ಲಿ ಅಂಜನಾದ್ರಿ ಸಮೀಪ ಚಿರತೆ ಕಾಣಿಸಿಕೊಂಡಿದೆ. ಅಂಜನಾದ್ರಿ ಬೆಟ್ಟದಲ್ಲಿ ನಡೆಯುವ ಹನುಮ ಮಾಲೆ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ ಹಗಲು – ರಾತ್ರಿ ದೇವರ ದರ್ಶನ ಪಡೆಯಲಿದ್ದಾರೆ. ಹಾಗಾಗಿ, ಕೂಡಲೇ ಅರಣ್ಯ ಇಲಾಖೆ ಬೋನ್ ಇಟ್ಟು ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.








