ಬೆಂಗಳೂರು: ಆಮ್ ಆದ್ಮಿ ಪಕ್ಷದ ಮಾಧ್ಯಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಪ್ರಚಾರ ಸಮಿತಿಯ ಉಪಾಧ್ಯಕ್ಷ ಲಕ್ಷ್ಮಿಕಾಂತ ರಾವ್ ” ರಾಜ್ಯದಲ್ಲಿ ಎಲ್ಲೆಂದರಲ್ಲಿ ಅವ್ಯಾಹತವಾಗಿ ಅಪರಾಧ ಚಟುವಟಿಕೆಗಳು ನಡೆಯುತ್ತಿದ್ದು ಜನತೆ ಶಾಂತಿಯಿಂದ ಜೀವಿಸಲು ಸಾಧ್ಯವಾಗುತ್ತಿಲ್ಲ. ಹಾಡಹಗಲೇ ಸಿನಿಮಿಯ ರೀತಿಯಲ್ಲಿ ಕೋಟ್ಯಾಂತರ ಹಣವನ್ನು ಲೂಟಿ ಮಾಡುವಂತ ಪ್ರಕರಣಗಳು ನಡೆಯುತ್ತಿವೆ. ಮಹಿಳೆ ಮತ್ತು ಮಕ್ಕಳ ಮೇಲೆ ಮೇಲೆ ನಿರಂತರ ಅತ್ಯಾಚಾರ – ದೌರ್ಜನ್ಯ ಪ್ರಕರಣಗಳು, ಕೋಟ್ಯಾಂತರ ರೂಪಾಯಿಗಳ ಸೈಬರ್ ಅಪರಾಧಗಳು, ಕಳ್ಳತನ ಕೊಲೆ , ದೊಂಬಿ, ಕೋಮು ದಳ್ಳುರಿ ನಡೆಯುತ್ತಿದ್ದರೂ ಗೃಹ ಸಚಿವ ಜಿ ಪರಮೇಶ್ವರ್ ಉಡಾಫೆ ಉತ್ತರಗಳನ್ನು ನೀಡುತ್ತಾ ಸಂಪೂರ್ಣ ನಿರಂತರ ವೈಫಲ್ಯವನ್ನು ಹೊಂದುತ್ತಿದ್ದಾರೆ. ಗೃಹ ಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಎಳ್ಳಷ್ಟು ಹತೋಟಿ ಇಲ್ಲದಾಗಿದೆ. ಕೂಡಲೇ ಇಂತಹ ನಿರ್ಲಕ್ಷ್ಯ , ಬೇಜವಾಬ್ದಾರಿ ಮಂತ್ರಿಗಳನ್ನು ಸಂಪುಟದಿಂದ ಕೈ ಬಿಡಬೇಕು ” ಎಂದು ಆಗ್ರಹಿಸಿದರು.
” ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡುತ್ತಿಲ್ಲ. ಇದು ಮುಂದುವರೆದರೆ ಮುಖ್ಯಮಂತ್ರಿಗಳ ಮನೆ ಮುಂದೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದ್ದಾರೆ ” ಎಂದು ಲಕ್ಷ್ಮಿಕಾಂತ ರಾವ್ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದರು ಎಂದು ಎಚ್ಚರಿಸಿದರು.
ಸಾಗರ ತಾಲ್ಲೂಕು KUWJ ಸಂಘದ ‘ನಿಕಟಪೂರ್ವ ಅಧ್ಯಕ್ಷ ಜಿ.ನಾಗೇಶ್’ಗೆ ಸಮಾಜಸೇವಾ ರತ್ನ ಪ್ರಶಸ್ತಿ ಪ್ರದಾನ








