ಬೆಂಗಳೂರು: ರಾಜ್ಯಾದ್ಯಂತ ತಾಪಮಾನದಲ್ಲಿ ಭಾರೀ ಕುಸಿದತವಾಗಿದ್ದು, ಕಳೆದ ವಾರದಿಂದ ಚಳಿ ಹೆಚ್ಚಳವಾಗಿದೆ.ಈ ನಡುವೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ಬೀದರ್‌ನಲ್ಲಿ ಗರಿಷ್ಠ ತಾಪಮಾನ 27.6 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಸಾಮಾನ್ಯಕ್ಕಿಂತ 5.7 ಡಿಗ್ರಿ ಸೆಲ್ಸಿಯಸ್ ಕುಸಿತ ಕಂಡಿದೆ. ಈ ಭಾಗದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ.
ರಾಯಚೂರಿನಲ್ಲಿ ಗರಿಷ್ಠ ತಾಪಮಾನ 30.2 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದು, 3.1 ಡಿಗ್ರಿ ಸೆಲ್ಸಿಯಸ್ ಕುಸಿತವಾಗಿದೆ. ಅದೇ ರೀತಿ ವಿಜಯಪುರ, ಕೊಪ್ಪಳ, ದಾವಣಗೆರೆ, ಗದಗ, ಶಿವಮೊಗ್ಗದಲ್ಲಿ ತಾಪಮಾನದಲ್ಲಿ ಇಳಿಕೆಯಾದ ಪರಿಣಾಮ ಚಳಿಯ ವಾತಾವರಣ ಇದೆ.








