ಬೆಂಗಳೂರು : ಬೆಂಗಳೂರಿನಲ್ಲಿ 7.11 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಭಾಗಿಯಾಗಿದ ಕಾನ್ಸ್ಟೇಬಲ್ ನನ್ನು ಇದೀಗ ಅಮಾನತುಗೊಳಿಸಲಾಗಿದೆ.
ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಸಸ್ಪೆಂಡ್ ಆಗಿದ್ದಾನೆ. ಸಸ್ಪೆಂಡ್ ಮಾಡಿ ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಆದೇಶ ಹೊರಡಿಸಿದ್ದಾರೆ. ಅಣ್ಣಪ್ಪ ನಾಯಕ್ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದ. ದರೋಡೆ ಪ್ರಕರಣದಲ್ಲಿ ಈತ ಕೂಡ ಭಾಗಿಯಾಗಿದ್ದರ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ.








