ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿನ್ನಲೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಸಮಿತಿಯಿಂದ ಮಹತ್ವದ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.
ಈ ಬಗ್ಗೆ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಸಮಿತಿಯಿಂದ ಮಾಹಿತಿ ನೀಡಲಾಗಿದ್ದು, ಹೈಕೋರ್ಟ್ ಚುನಾವಣೆಗೆ ತಡೆಯಾಜ್ಞೆ ನೀಡಿರುವ ಕುರಿತಂತೆ ಸಾಗರದ ಜನತೆಗೆ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸದಸ್ಯರು ನೀಡಲಿದ್ದಾರೆ ಎನ್ನಲಾಗುತ್ತಿದೆ.
ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಗಿರಿಧರ್ ಭಟ್ ಸೇರಿದಂತೆ ಇತರೆ ಸಮಿತಿಯ ಸದಸ್ಯರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದು, ಕೋರ್ಟ್ ಆದೇಶ, ಚುನಾವಣೆ ಮುಂದೂಡಿಕೆಯ ಬಗ್ಗೆ, ಮುಂದಿನ ನಡೆಯ ಬಗ್ಗೆಯೂ ಮಾಹಿತಿಯನ್ನು ಹಂಚಿಕೊಳ್ಳುವ ಸಾಧ್ಯತ ಇದೆ.
ನ.30ರ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ
ಸಾಗರದ ಕೊರಚ-ಕೊರಮ ಸಮುದಾಯಕ್ಕೆ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಲ್ಲಿ ಸೂಕ್ತ ಸ್ಥಾನ ಮಾನ ನೀಡಿಲ್ಲ. ಹೀಗಾಗಿ ನವೆಂಬರ್.30ರ ಚುನಾವಣೆಗೆ ತಡೆಯಾಜ್ಞೆ ನೀಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ಮುಂದಿನ ಆದೇಶದವರೆಗೆ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ತಡೆಯಾಜ್ಞೆ ನೀಡಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..
BREAKING: ನ.30ರಂದು ನಿಗದಿಯಾಗಿದ್ದ ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ
BREAKING: ಸಚಿವ ಕೆ.ಜೆ ಜಾರ್ಜ್ ಭೇಟಿಯಾದ ಡಿಸಿಎಂ ಡಿ.ಕೆ ಶಿವಕುಮಾರ್: ನಾಯಕತ್ವ ಬದಲಾವಣೆ ಕುರಿತು ರಹಸ್ಯ ಮಾತುಕತೆ?








