ಚಾಮರಾಜನಗರ : ಕೇರಳದಲ್ಲಿ ಅಮೀಬಾ ವೈರಸ್ ಹಿನ್ನೆಲೆ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು ಕೆರಳಿಕೆ ತಳ್ಳುವ ಅಯ್ಯಪ್ಪ ಮಾಲಾಧಾರಿಗಳಿಗೆ ಮಾರ್ಗಸೂಚಿ ಹಾಗೂ ಕೇರಳದ ಗಡಿ ಮೂಲೆಹೊಳೆ ಚೆಕ್ಪೋಸ್ಟ್ ನಲ್ಲಿ ಜಾಗೃತಿ ಕಾರ್ಯ ನಡೆಸಲಾಗುತ್ತಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಯಲ್ಲಿ ಗುಂಡ್ಲುಪೇಟೆ ತಾಲೂಕು ಜಾಗೃತಿ ಕಾರ್ಯ ನಡೆಸುತ್ತಿದ್ದಾರೆ. ಭಿತ್ತಿಪತ್ರ ಹಿಡಿದು ಅಲೀಂ ಪಾಷಾ ಜಾಗೃತಿ ಮೂಡಿಸುತ್ತಿದ್ದಾರೆ. ಶಬರಿಮಲೆಗೆ ತೆರಳುವ ಪ್ರತಿಯೊಂದು ವಾಹನದ ಮೇಲೆ ಹದ್ದಿನ ಕಣ್ಣು ಇಡಲಾಗಿದೆ ಕೇರಳದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಯನ್ನು ತಿಳಿಸುತ್ತಿದ್ದಾರೆ. ಜ್ವರ, ತಲೆನೋವು ಇದ್ದವರು ನಿರ್ಲಕ್ಷಿಸಬೇಡಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.








