ಗದಗ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು ಎಷ್ಟು ದಿನ ತನ್ನಗಿದ್ದ ನಾಯಕತ್ವ ಬದಲಾವಣೆ ಇದೀಗ ಹೈಕಮಾಂಡ್ವರೆಗೂ ತಲುಪಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಅವರನ್ನು ಭೇಟಿಯಾಗಿ ಈ ವಿಚಾರವಾಗಿ ಚರ್ಚೆ ಮಾಡಿದ್ದು, ಇನ್ನೊಂದು ಕಡೆ ಡಿಕೆ ಶಿವಕುಮಾರ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕಸರತ್ತು ನಡೆಸಿದ್ದಾರೆ.
ಇದರ ಮಧ್ಯ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೋಗತಿ ಒಬ್ಬರು ಭವಿಷ್ಯ ನುಡಿದಿದ್ದಾರೆ. ಹುಲಿಗೆಮ್ಮ ದೇವಿಯ ಜೋಗತಿ ಬೈಲಮ್ಮ ಬಾಳಮ್ಮಣ್ಣವರು ಭವಿಷ್ಯ ನುಡಿದಿದ್ದು, ಗದಗದ ರಾಜೋಟೇಶ್ವರ ನಿಗರದ ನಿವಾಸಿ ಜೋಗತಿ ಭೈಲಮ ಅವರು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಮತ್ತೊಂದು ಕಡೆ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಬಾಗಲಕೋಟೆ, ಹಾವೇರಿ ಹಾಗೂ ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ಮೈಸೂರು ಜಿಲ್ಲೆಯಲ್ಲಿ ಬೆಂಬಲಿಗರು ದೇವರಿಗೆ ಪೂಜೆ ಸಲ್ಲಿಸಿ ಈಡುಗಾಯಿ ಒಡೆದು ಹರಕೆ ಸಲ್ಲಿಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.








