ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಯುವಕನಿಂದ ಬಿಬಿಎಂ ವಿದ್ಯಾರ್ಥಿನಿಯ ಬರ್ಬರ ಕೊಲೆಯಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ, ಪೊಲೀಸ್ ಠಾಣ ವ್ಯಾಪ್ತಿಯ ತಮ್ಮೇನಹಳ್ಳಿ ಈ ಒಂದು ಭೀಕರ ಕೊಲೆ ನಡೆದಿದೆ.
ಪ್ರತಿಷ್ಟಿತ ಕಾಲೇಜಿನಲ್ಲಿ ಬಿಬಿಎಂ ಓದುತ್ತಿದ್ದ ದೇವಿಶ್ರೀ (21) ಕೊಲೆಯಾದ ಯುವತಿ ಎಂದು ತಿಳಿದು ಬಂದಿದೆ. ನಿನ್ನೆ ಬೆಳಿಗ್ಗೆ ಆರೋಪಿ ಪ್ರೇಮವರ್ಧನ್ ಜೊತೆಗೆ ದೇವಿಶ್ರೀ ತೆರಳಿದ್ದಾಳೆ. ದೇವಿಶ್ರೀಯನ್ನು ಸ್ನೇಹಿತೆಯ ರೂಮ್ಗೆ ಆರೋಪಿ ಕರೆದೊಂದಿದ್ದಾನೆ. ಬಳಿಕ ಯುವತಿಯನ್ನು ಕೊಲೆಗೈದು ಪ್ರೇಮ್ ವರ್ಧನ್ ರೂಮಿನಿಂದ ಪರಾರಿಯಾಗಿದ್ದಾನೆ.
ಆಂಧ್ರಪ್ರದೇಶದ ಮೂಲದ ದೇವಿಶ್ರೀ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದಳು. ಸದ್ಯ ದೆವಿಶ್ರೀ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹಂತಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೊಲೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.








