ಚಿಕ್ಕಮಗಳೂರು : ಕಾಳಿಂಗ ಸರ್ಪಗಳ ಸೆರೆಗೆ ಕಾರ್ಯಪಡೆಯ ರಚಿಸಲು ತೀರ್ಮಾನಿಸಲಾಗಿದೆ. ಮಲೆನಾಡು ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಮನೆಗಳು, ತೋಟಗಳಲ್ಲಿ ಕಾಳಿಂಗ ಸರ್ಪಗಳು ಕಾಣಿಸಿಕೊಳ್ಳುತ್ತಿವೆ. ಕಾಳಿಂಗ ಸರ್ಪಗಳು ಹೆಚ್ಚಿರುವ ಪ್ರದೇಶದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಕಾಳಿಂಗ ಸರ್ಪಗಳ ಸೆರೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ಪ್ಲಾನ್ ಮಾಡಲಾಗಿದೆ. ಕಾಳಿಂಗ ಸರ್ಪಗಳ ಸೆರೆ ಹಿಡಿಯಲು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಟ್ರೇನಿಂಗ್ ನೀಡಲಾಗಿದ್ದು, ಅರಣ್ಯ ಇಲಾಖೆಯ ವಿಭಾಗದ ಐವರು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ. ಸಂಘ ಸಂಸ್ಥೆಗಳು ಖಾಸಗಿ ವ್ಯಕ್ತಿಗಳಿಂದ ಸೆರೆ ಹಿಡಿಯದಂತೆ ಸೂಚನೆ ನೀಡಲಾಗಿದೆ. ಚಿಕ್ಕಮಂಗಳೂರು, ಉತ್ತರಕನ್ನಡ ಶಿವಮೊಗ್ಗ ಹಾಗೂ ಉಡುಪಿ ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚು ಕಾಣಿಸಿಕೊಳ್ಳುತ್ತಿವೆ.
ಉಡುಪಿ ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸುತ್ತಿವೆ. ಇಟಿಎಫ್ ಮತ್ತು ಎಲ್ ಟಿ ಎಫ್ ಮಾದರಿಯಲ್ಲಿ ಕಾಳಿಂಗ ಸರ್ಪಗಳ ಸರಿಗೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಅರಣ್ಯ ಅಧಿಕಾರಿಗಳ ಜೊತೆಗೆ ಟಾಸ್ಕ್ ಫೋರ್ಸ್ ರಚನೆಗೆ ಸೂಚನೆ ನೀಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು.








