ಬೆಂಗಳೂರು: ಆಮ್ ಆದ್ಮಿ ಪಕ್ಷದ 14ನೇ ಸಂಸ್ಥಾಪನಾ ದಿನಾಚರಣೆಯನ್ನು ಇದೇ ತಿಂಗಳ 26ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಬೆಂಗಳೂರಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಡಗರದಿಂದ ಆಚರಿಸಲಾಗುವುದೆಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಬಗ್ಗೆ ಮಾತನಾಡುತ್ತಾ ” ದೇಶದಲ್ಲಿ ಅವ್ಯಾಹತವಾಗಿ ಬೇರು ಬಿಟ್ಟಿರುವ ಭ್ರಷ್ಟ ಆಡಳಿತ ವ್ಯವಸ್ಥೆ, ಪಾರಂಪರಿಕ ಪಕ್ಷಗಳ ಕುಟುಂಬ ರಾಜಕಾರಣ , ಸ್ವಜನ ಪಕ್ಷಪಾತ, ಜನಸಾಮಾನ್ಯರಿಗೆ ಮೂಲಭೂತ ಹಕ್ಕುಗಳ ನಿರಾಕರಣೆ ಇವುಗಳ ವಿರುದ್ಧ ಕಳೆದ 13 ವರ್ಷಗಳ ಹಿಂದೆ ಉದಯಿಸಿದ ಆಮ್ ಆದ್ಮಿ ಪಕ್ಷವು ಕೇವಲ ರಾಜಕೀಯ ಪಕ್ಷವಾಗಿರದೆ ಜನಪರ ರಾಜಕೀಯ ಆಂದೋಲನವಾಗಿದೆ. ಪ್ರತಿಯೊಬ್ಬ ಜನಸಾಮಾನ್ಯನು ಸಹ ರಾಜಕೀಯ ಹಕ್ಕುಗಳನ್ನು ಪಡೆಯಬೇಕೆಂಬುದೇ ಪಕ್ಷದ ಹೆಗ್ಗುರಿಯಾಗಿದೆ. ಜಲಸಾಮಾನ್ಯನಿಂದಲೇ ಜಲಸಾಮಾನ್ಯನ ಮೂಲಭೂತ ಸಮಸ್ಯೆಗಳೆಲ್ಲ ಪರಿಹಾರ ಆಗಬೇಕೆಂಬುದು ಪಕ್ಷದ ಆಶಯವಾಗಿದೆ” ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ವಿಶ್ವ ಮಾನ್ಯ ಜನಪ್ರಿಯ ನಾಯಕ ಅರವಿಂದ ಕೇಜ್ರಿವಾಲ್ ರವರ ನೇತೃತ್ವದಲ್ಲಿ ಪಕ್ಷವು ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಅಧಿಕಾರವನ್ನು ಸ್ಥಾಪಿಸಿ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ವಿಷಯದಲ್ಲಿ ಕ್ರಾಂತಿಕಾರಕ ಮಾರ್ಪಾಡುಗಳನ್ನು ಮಾಡಿರುವುದು ನಮ್ಮ ಪಕ್ಷದ ಪ್ರಮುಖ ಸಾಧನೆಯಾಗಿದೆ. ಮುಂಬರುವ ದಿವಸಗಳಲ್ಲಿ ಗುಜರಾತ್, ಗೋವಾ, ಕರ್ನಾಟಕ , ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಪಕ್ಷವು ಆಡಳಿತವನ್ನು ಸ್ಥಾಪಿಸುವುದರಲ್ಲಿ ಸಂಘಟನಾತ್ಮಕವಾಗಿ ಮುನ್ನಡೆಯನ್ನು ಸಾಧಿಸುತ್ತಿದೆ. ಅತ್ಯಂತ ವೇಗವಾಗಿ ಪ್ರವರ್ಧಮಾನಕ್ಕೆ ಬರುತ್ತಿರುವ ರಾಷ್ಟ್ರೀಯ ಪಕ್ಷವಾಗಿ ಆಮ್ ಆದ್ಮಿ ಪಕ್ಷವು ರೂಪು ಗೊಂಡಿದೆ. ದೇಶದ ಜನಸಾಮಾನ್ಯನ ಅಶೋಕ್ತರಗಳಿಗೆ ಪ್ರಮುಖ ಧ್ವನಿಯಾಗಿ, ಜನಸಾಮಾನ್ಯನು ಸಹ ರಾಜಕೀಯ ಕ್ಷೇತ್ರದಲ್ಲಿ ಮಹತ್ವದ ಸಾಧನೆಯನ್ನು ಸಾಧಿಸಬಹುದೆಂಬುದನ್ನು ಈಗಾಗಲೇ ಸಾಬೀತು ಮಾಡಿ ತೋರಿಸಿದ್ದೇವೆ. ಪ್ರತಿಯೊಬ್ಬ ನಾಗರಿಕರು ಈ ರಾಜಕೀಯ ಆಂದೋಲನದಲ್ಲಿ ಭಾಗವಹಿಸ ಬೇಕಾದ ಅನಿವಾರ್ಯ ಕಾಲಘಟ್ಟದಲ್ಲಿ ನಾವಿದ್ದೇವೆ. ಮುಂಬರುವ ದಿವಸಗಳಲ್ಲಿ ಪರಂಪರಾನುಗತ ಪಕ್ಷಗಳ ಸ್ಥಾಪಿತ ಹಿತಾಸಕ್ತಿಗಳನ್ನು ಮುರಿದು ದೇಶದ ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ವ್ಯವಸ್ಥೆಯನ್ನು ಮರು ಸ್ಥಾಪಿಸುವುದೇ ಪಕ್ಷದ ಪ್ರಮುಖ ಉದ್ದೇಶವಾಗಿದೆ ” ಎಂದು ಜಗದೀಶ್ ವಿ.ಸದಂ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಖಜಾಂಚಿ ಪ್ರಕಾಶ್ ನೆಡುನಂಗಡಿ ” 14ನೇ ವರ್ಷದ ಸಂಸ್ಥಾಪನಾ ದಿನಾಚರಣೆ ನಿಮಿತ್ತ ರಾಜ್ಯದಲ್ಲಿಯೂ ಎಲ್ಲಾ ಕಡೆ ವಿಜೃಂಭಣೆಯಿಂದ ಆಚರಿಸಿ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಮಾದರಿಯಾಗಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗುತ್ತದೆ ” ಎಂದು ತಿಳಿಸಿದರು.
Health Tips: ಫ್ರಿಡ್ಜ್‌ನಲ್ಲಿಟ್ಟ ಹಿಟ್ಟನ್ನು ಬಳಸುವುದು ಸುರಕ್ಷಿತವೇ ?
ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬೊಮ್ಮಾಯಿ
ಈ ಎರಡು ಎಲೆಗಳು ಮನೆಯಲ್ಲಿದ್ದರೆ ಸಾಕು, ಎಲ್ಲ ದೋಷಗಳು, ದುಷ್ಟಶಕ್ತಿಗಳು ಓಡಿ ಹೋಗುತ್ತವೆ








