ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿಯನ್ನು ಮತ್ತೆ ನೀಡಿ ಸರ್ಕಾರ ಆದೇಶಿಸಿದೆ. ಶೇ.50ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಕಾಲಾವಕಾಶವನ್ನು ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದಿದ್ದಾರೆ.
ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದು ಹೇಳಿದ್ದಾರೆ.
ರಿಯಾಯಿತಿಯೊಂದಿಗೆ ಪಾವತಿ ಮಾಡುವ ವಿಧಾನ:
1.ಈ ಕೆಳಗಿನ ಮೊಬೈಲ್ ಆಪ್ಗಳನ್ನು ಬಳಸಿ (ಪ್ಲೇ ಸ್ಟೋರ್ ಮತ್ತು ಅಪಲ್ ಸ್ಟೋರ್ನಲ್ಲಿ ಲಭ್ಯ):
ಕರ್ನಾಟಕ ರಾಜ್ಯ ಪೊಲೀಸ್ ಆಪ್
ಕರ್ನಾಟಕ ಒನ್ ಆಪ್
ಆಸ್ಟಮ್ (BTP/ಟ್ರಾಫಿಕ್ ಉಲ್ಲಂಘನೆ ವ್ಯವಸ್ಥೆ)
1.ನಿಮ್ಮ ವಾಹನದ ಸಂಖ್ಯೆಯನ್ನು ನಮೂದಿಸಿ.
2.ನಿಮ್ಮ ವಾಹನದ ಫೋಟೋ/ವಿವರಗಳನ್ನು ಪರಿಶೀಲಿಸಿ.
3. ರಿಯಾಯಿತಿಯೊಂದಿಗೆ ದಂಡವನ್ನು ಪಾವತಿಸಿ.
2.ಯಾವುದೇ ಸಂಚಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮುಖೇನ ಪಾವತಿಸುವಿಕೆ.
3. ಸಂಚಾರ ನಿರ್ವಹಣಾ ಕೇಂದ್ರ (TMC)ಗೆ ಭೇಟಿ ನೀಡಿ:
ಮೊದಲನೇ ಮಹಡಿ, ಇನ್ಸಾಂಟ್ರಿ ರಸ್ತೆ, ಇಂಡಿಯನ್ ಎಕ್ಸ್ಪ್ರೆಸ್ ಹತ್ತಿರ, ಬೆಂಗಳೂರು
ಅರ್ಧ ದಂಡ, ಪೂರ್ಣ ಪರಿಹಾರ!
Half the fine, full the relief!#TrafficFineDiscount #ClearYourDues #50PercentChallan #RoadSafety #DriveSafe #BCPCares #KarnatakaPolice@DgpKarnataka @KarnatakaCops @CPBlr @Jointcptraffic @BlrCityPolice pic.twitter.com/FeNDOtOhtc
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) November 20, 2025








