ಹುಬ್ಬಳ್ಳಿ : ರಾಜ್ಯದಲ್ಲಿ ದರೋಡೆ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಆರ್ ಬಿಐ ಹೆಸರಿನಲ್ಲಿ ದರೋಡೆ ನಡೆದಿದ್ದರೆ. ಇತ್ತ ಹುಬ್ಬಳ್ಳಿಯಲ್ಲಿ ಇಡಿ ಹೆಸರಿನಲ್ಲಿ ದರೋಡೆ ನಡೆದಿದೆ.
ಹೌದು, ಹುಬ್ಬಳ್ಳಿಯಲ್ಲಿ ಇಡಿ ಅಧಿಕಾರಿಗಳು ಎಂದು ಬೆದರಿಸಿ ಚಿನ್ನಾಭರಣ ದೋಚಲಾಗಿದೆ. ವಿಚಾರಣೆ ನೆಪದಲ್ಲಿ 2 ಕೆಜಿ 942 ಗ್ರಾಂ ಚಿನ್ನಾಭರಣ ಲೂಟಿ ಮಾಡಲಾಗಿದೆ.
ಹುಬ್ಬಳ್ಳಿಯ ನೀಲಿಜನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, 3 ಕೋಟಿಗೂ ಹೆಚ್ಚು ಚಿನ್ನಾಭರಣ ಲೂಟಿ ಮಾಡಲಾಗಿದೆ. ಕೇರಳದ ವ್ಯಾಪಾರಿ ಎಂ.ಆರ್. ಸುಧೀನ್ ಎಂಬುವರಿಗೆ ವಂಚಿಸಲಾಗಿದೆ. ನವೆಂಬರ್ 20 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.








