ಬೆಂಗಳೂರು : ರಾಜ್ಯದ ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಮನೆಯಲ್ಲಿಯೇ ಕುಳಿತು ವೆಬ್‌ಸೈಟ್ ಮೂಲಕ ತಮ್ಮ ಆಸ್ತಿ ವಿವರಗಳನ್ನು ಪರಿಶೀಲಿಸಿ ಇ-ಸ್ವತ್ತುಗೆ ಅರ್ಜಿ ಸಲ್ಲಿಸಬಹುದು.
ಹೌದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನದಡಿ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ ನೀಡುವ ನಿಯಮ ಜಾರಿಗೊಳಿಸಲಾಗಿದೆ. ಗ್ರಾಮೀಣ ಜನರು ಮನೆಯಲ್ಲಿಯೇ ಕುಳಿತು ವೆಬ್‌ಸೈಟ್ ಮೂಲಕ ತಮ್ಮ ಆಸ್ತಿ ವಿವರಗಳನ್ನು ಪರಿಶೀಲಿಸಿ ಇ-ಸ್ವತ್ತುಗೆ ಅರ್ಜಿ ಸಲ್ಲಿಸಬಹುದು.
ಗ್ರಾಮೀಣ ಸ್ವತ್ತುಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ
‘ಇ-ಸ್ವತ್ತು ಅಭಿಯಾನ’ದ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರ ಆಸ್ತಿಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ (ನಮೂನೆ- 11ಎ ಮತ್ತು ನಮೂನೆ 11ಬಿ) ವಿತರಣೆ
ನಿರಾಕ್ಷೇಪಣಾ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳ ಲೆಕ್ಕಾಚಾರ ಪ್ರಕ್ರಿಯೆ ಸರಳ ಮತ್ತು ವೈಜ್ಞಾನಿಕ.
ಗ್ರಾಮೀಣ ಆಸ್ತಿಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ ವಿತರಿಸುವ ಪ್ರಕ್ರಿಯೆ ಸುಗಮ
ಪ್ರಮುಖ ಚಟುವಟಿಕೆಗಳು
ಸ್ವತ್ತುಗಳಿಗೆ ಖಾತಾ ಅಥವಾ ಪಿಐಡಿ (ಪ್ರಾಪರ್ಟಿ ಐಡಿ) ನೀಡುವುದು.
ಕಟ್ಟಡ ಮತ್ತು ಪರಿವರ್ತನೆಯಾಗದೇ ಇರುವ ಭೂಮಿ ಅಥವಾ ಪರಿವರ್ತನೆಯಾದ ಭೂಮಿಗೆ ತೆರಿಗೆ.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೆರಿಗೆಗೆ ಒಳಪಡದ ಎಲ್ಲಾ ಆಸ್ತಿಗಳು ತೆರಿಗೆ ವ್ಯಾಪ್ತಿಗೆ.
. ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಏಕ ರೂಪದ/ಮಾದರಿಯ ತೆರಿಗೆ ಹಾಗೂ ಶುಲ್ಕಗಳು.
ಮಾಲೀಕರು ಅಥವಾ ಅಧಿಬೋಗದಾರರ ಆಸ್ತಿಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿಯಿಂದ ದಾಖಲೆಗಳನ್ನು ಒದಗಿಸುವುದು.







