ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿ 11 ಲಕ್ಷ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 7.1 ಕೋಟಿ ರೂಪಾಯಿ ಹಣ ರಿಕವರಿ ಆಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 9 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದರು.
ನಮ್ಮ ಪೊಲೀಸರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಶೇಕಡ 98.6 ರಷ್ಟು ಹಣ ರಿಕವರಿ ಆಗಿದೆ ದರೋಡೆ ಪ್ರಕರಣದಲ್ಲಿ ಇದುವರೆಗೂ 9 ಆರೋಪಿಗಳ ಬಂಧನ ಆಗಿದೆ. ಚೆನ್ನೈ ಆಂಧ್ರ ಪೊಲೀಸರು ಸಹ ಸಾಕಷ್ಟು ಸಹಾಯ ಮಾಡಿದ್ದಾರೆ. ಈಗಾಗಲೇ ತಂಡಕ್ಕೆ 5 ಲಕ್ಷ ಬಹುಮಾನ ಘೋಷಿಸಲಾಗಿದೆ. ಹೆಚ್ಚುವರಿಯಾಗಿ 2 ಲಕ್ಷ ಬಹುಮಾನ ನೀಡುತ್ತಿದ್ದೇವೆ. ಸದ್ಯ 9 ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿಕೆ ನೀಡಿದರು.








