ಮಂಡ್ಯ : ರಾಜ್ಯ ಕಾಂಗ್ರೆಸ್ ನಲ್ಲಿ ಸದ್ಯ ಬದಲಾವಣೆಯ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು, ಈ ವಿಚಾರವಾಗಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ ದಲಿತರನ್ನು ಓಟಿಗಷ್ಟೇ ಇಟ್ಟುಕೊಂಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಬಿಟ್ಟು ಕೊಡ್ತಾರೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ ಎಂದರು.
ಮಂಡ್ಯದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ದಲಿತರನ್ನು ಓಟಿಗಷ್ಟೇ ಇಟ್ಟುಕೊಂಡಿದ್ದಾರೆ. ಸಿದ್ದರಾಮಯ್ಯ ಅಧಿಕಾರಕ್ಕಾಗಿ ಪರಮೇಶ್ವರವರನ್ನು ಸೋಲಿಸಿದರು. ಶ್ರೀನಿವಾಸ್ ಪ್ರಸಾದ್ ಅವರನ್ನು ಸಚಿವ ಸಂಪುಟದಿಂದ ಕಿತ್ತು ಹಾಕಿದರು. ನಂತರ ಡಿಸಿಎಂ ಪಟ್ಟಕ್ಕೆ ಜಿ ಪರಮೇಶ್ವರ್ ಬೇಡಿಕೊಂಡಿದ್ದರು. ಆದರೂ ಸಿದ್ದರಾಮಯ್ಯ ತಿರಸ್ಕಾರ ಮಾಡಿದರು. ಈಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಪಟ್ಟ ಬಿಟ್ಟು ಕೊಡ್ತಾರ?ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ ಎಂದು ವಾಗ್ದಾಳಿ ನಡೆಸಿದರು.








